ಬೆಂಗಳೂರು: ನಾನು ಆನ್ ರೆಕಾರ್ಡ್ ಹೇಳ್ತೇನೆ ಸಚಿವ ಜಮೀರ್ ಹೇಳಿಕೆ ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡಿದ್ದು ತಪ್ಪು ಅಂತ ಹೇಳಿದ್ದಾರೆ. ಹೌದು ನಾನು ಆ ಹೇಳಿಕೆಯನ್ನು ಒಪ್ಪುವುದಿಲ್ಲ.
ಅದನ್ನು ನಾನು ಖಂಡಿಸ್ತೇನೆ. ಜಮೀರ್ ಅವರು ಏನು ಬೇಕಾದ್ರೂ ಕರೆದುಕೊಳ್ಳಲಿ. ಕರಿಯ ಅಂತಾದ್ರೂ ಅನ್ನಲಿ, ಕೊಚ್ಚೆ ಅಂತಾದ್ರೂ ಕರೆಯಲಿ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳ್ತೇನೆ. ನಾನು ಆನ್ ರೆಕಾರ್ಡ್ ಹೇಳ್ತೇನೆ ಆ ಹೇಳಿಕೆ ಸರಿಯಲ್ಲ. ಜಮೀರ್ ವಿರುದ್ಧ ಕ್ರಮದ ಬಗ್ಗೆ ಆಮೇಲೆ ನೋಡೋಣ ಎಂದರು.
ಇನ್ನೂ ವಕ್ಫ್ ನೋಟಿಸ್ ಸಂಬಂಧ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದು ಬಿಜೆಪಿಯವರ ಮೂರ್ಖತನ. ಅವರ ಕಾಲದಲ್ಲೇ ಪಹಣಿಗಳು ಬರುತ್ತಿವೆ. ಅದನ್ನ ನಮ್ಮವರು ನೋಡಿಲ್ಲ. ಈಗ ಅದರ ಬಗ್ಗೆ ಮಾತನಾಡ್ತಿದ್ದಾರೆ. ನಾವು ಮಾತಾಡಿದ್ರೆ ಮಾಧ್ಯಮದವರು ಕವರ್ ಮಾಡಲ್ಲ ಎಂದು ತಿಳಿಸಿದರು.