ರಾಮನಗರ:- ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ಹಿನ್ನೆಲೆ ಡಿಕೆ ಶಿವಕುಮಾರ್ ಹೊರಡಿಸಿರುವ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಇಕ್ಬಾಲ್ ಹುಸ್ಸೇನ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಶಿವಕುಮಾರ್ ನಮ್ಮ ಅಧ್ಯಕ್ಷರು, ಪಕ್ಷದ ಸದಸ್ಯರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಸ್ವಾತಂತ್ರ್ಯ ಅವರಿಗಿದೆ, ನನಗೆ ನೋಟೀಸ್ ನೀಡಿ 7ದಿನಗೊಳಗೆ ಉತ್ತರ ನೀಡುವಂತೆ ಹೇಳಿದ್ದಾರೆ, ಉತ್ತರ ಕೊಡುತ್ತೇನೆ,
ಅದರೆ ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಹೇಳಿದರು. ಬೇರೆ ಶಾಸಕರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತಾಡಿದ್ದಾರೆ, ಅವರಿಗಿಲ್ಲದ ನೋಟೀಸ್ ನಿಮಗ್ಯಾಕೆ ಅಂತ ಕೇಳಿದರೆ, ಮಾಧ್ಯಮದವರು ಅವರನ್ನೇ ಕೇಳಬೇಕು ಅಂತ ಇಕ್ಬಾಲ್ ಹೇಳಿದರು.