ನನ್ನನ್ನು ಬಂಧಿಸಿ ED ಅಧಿಕಾರಿಗಳು 3 ತಿಂಗಳ ಕಾಲ ಕಿರುಕುಳ ನೀಡಿದ್ದಾರೆ: ಬಿ.ನಾಗೇಂದ್ರ

0
Spread the love

ಬೆಂಗಳೂರು: ನನ್ನನ್ನು ಬಂಧಿಸಿ ಇಡಿ ಅಧಿಕಾರಿಗಳು 3 ತಿಂಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಮಾಜಿ ಸಚಿವ ಬಿ.ನಾಗೇಂದ್ರ ಹೇಳಿದರು. ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನಿಂದ ಯಾವುದೇ ತಪ್ಪು ನಡೆದಿಲ್ಲ, ಆದರೂ ನನ್ನನ್ನು ಬಂಧಿಸಿ ಇಡಿ ಅಧಿಕಾರಿಗಳು 3 ತಿಂಗಳ ಕಾಲ ಕಿರುಕುಳ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಹೆಸರು ಹೇಳುವಂತೆ ಕಿರುಕುಳ ನೀಡಿದ್ದಾರೆ. ಬಿಜೆಪಿಯ ಹಿರಿಯ ನಾಯಕರ ಒತ್ತಡದಿಂದ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಎಸ್ಐಟಿ ನನ್ನ ಪಾತ್ರ ಇಲ್ಲ ಅಂದ್ರೂ ಕೇಂದ್ರ, ಬಿಜೆಪಿಯಿಂದ ಷಡ್ಯಂತ್ರ ರೂಪಿಸಿದೆ. ಇದು ಬ್ಯಾಂಕ್ ಮತ್ತು ಬ್ಯಾಂಕ್ ಅಧಿಕಾರಿಗಳಿಂದ ಆಗಿರುವ ಹಗರಣ. ವಿನಾಕಾರಣ ನಮ್ಮ ಸರ್ಕಾರವನ್ನು ಸಿಲುಕಿಸುವ ಕೆಲಸ ಮಾಡಲಾಗಿದೆ. ಕೇಂದ್ರ ಹಾಗೂ ಬಿಜೆಪಿಯಿಂದ ನಮ್ಮ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಲಾಗುತ್ತಿದೆ. ಕೇಂದ್ರದ ಯಾವುದೇ ಬೆದರಿಕೆಗಳಿಗೆ ಕಾಂಗ್ರೆಸ್ ಹೆದರುವುದಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here