ಬೆಂಗಳೂರು: ತಮ್ಮ ಮನೆಯ ನಾಯಿಯು ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ವಿಚಾರಣೆಗೆ ಹಾಜರಾದರು.
ಪೊಲೀಸರು ಕೇಳಿದ ಹಲವಾರು ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ‘ಘಟನೆ ನಡೆದಾಗ ನಾನು ಗುಜರಾತ್ ನಲ್ಲಿ ಶೂಟಿಂಗ್‌ನಲ್ಲಿದ್ದೆ. ಹುಡುಗರಿಗೆ ಕರೆಕ್ಟಾಗಿ ನೋಡಿಕೊಳ್ಳುವಂತೆ ಹೇಳಿದ್ದೆ. ಕೇರ್ ಟೇಕರ್ ಗೆ ಸರಿಯಾಗಿ ನೋಡಿಕೊಳ್ಳುವಂತೆ ಸೂಚನೆ ಕೊಟ್ಟಿದ್ದೆ’ ಎಂದು ತಿಳಿಸಿದ್ದಾರೆ.
ಸೆಲೆಬ್ರಿಟಿಗಳ ಮನೆ ಬಳಿ ಸಾಕಷ್ಟು ಜನ ಬರ್ತಿರ್ತಾರೆ. ಹೀಗಾಗಿ ಅಕ್ಕಪಕ್ಕದ ಮನೆಗಳ ನಿವಾಸಿಗಳಿಗೆ ತೊಂದರೆಯಾಗುತ್ತೆ. ಯಾರೆ ಬಂದ್ರೂ ವಿಚಾರಿಸುವಂತೆ ನೋಡಿಕೊಳ್ಳುವಂತೆ ಹೇಳಿರುತ್ತೇನೆ. ಈ ಹಿನ್ನೆಲೆಯಲ್ಲಿ ಕಾರ್ ಪಾರ್ಕಿಂಗ್ ವಿಚಾರವಾಗಿ ಕೇಳಿದ್ದಾರೆ. ಎಚ್ಚರಿಕೆ ವಹಿಸಬೇಕಿತ್ತು ಅಂತಾ ಹುಡುಗರಿಗೆ ಹೇಳಿದ್ದೇನೆ. ಅಮಿತಾ ಜಿಂದಾಲ್ ಅವರಿಗೆ ಈ ರೀತಿಯಾದಾಗ ಅವರ ಆಸ್ಪತ್ರೆ ವೆಚ್ಚ ಭರಿಸುವಂತೆ ಹೇಳಿದ್ದೇನೆ. ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇನೆ’ ಎಂಬ ಮಾತುಗಳನ್ನು ದರ್ಶನ್ ದಾಖಲಿಸಿದ್ದಾರೆ.