• About
  • Advertise
  • Privacy & Policy
  • Contact
Wednesday, November 18, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಟೀಕೆಗಳನ್ನು ಸ್ವಾಗತಿಸುತ್ತೇನೆ, ವಿಕೋಪಕ್ಕೆ ಹೋಗಿ ಟೀಕೆ ಮಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ: ಡಿಸಿಎಂ

Vijaya Sakshi News Desk by Vijaya Sakshi News Desk
October 19, 2025
in Karnataka News
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ
0
SHARES
2
VIEWS
Share on Facebook

ಬೆಂಗಳೂರು: ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಘನತೆಗೆ ಚ್ಯುತಿ ತರುತ್ತಿರುವವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ “ನಾಗರಿಕರೊಂದಿಗೆ ಸಂವಾದ” ನಡೆಸಿ, ಅವರ ಅಹವಾಲುಗಳನ್ನು ಆಲಿಸಿ‌ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.

“ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು, ಮೂಲವನ್ನು ಮರೆತರೆ ಯಶಸ್ಸು ಸಾಧಿಸುವುದಿಲ್ಲ ಎಂದು ನಾನು ನಂಬಿದ್ದೇನೆ” ಎಂದು ತಿಳಿಸಿದರು.

“ನಗರದಾದ್ಯಂತ ‌ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ಫೋಟೊ‌ ತೆಗೆದು ಅದನ್ನು ಮೊಬೈಲ್ ಆ್ಯಪ್ ಮೂಲಕ ಸರ್ಕಾರದ‌ ಗಮನಕ್ಕೆ ತರುವ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಾವು ರೂಪಿಸಿದ್ದೇವೆ. ಮಾಧ್ಯಮಗಳೂ ಸಹ ಸುದ್ದಿ ಮಾಡುತ್ತಿವೆ. ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಅಂತಹವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಜನ ನಮಗೆ ಅವಕಾಶ ನೀಡಿದ್ದು, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ” ಎಂದರು.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇತಿಹಾಸ ಗಮನಿಸಿದರೆ ನಾವು ಮಾಡಿದಷ್ಟು ತೀರ್ಮಾನಗಳನ್ನು ಯಾರೂ ಸಹ ಮಾಡಿಲ್ಲ. ನಾವು ಮಾಡಿದ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ, ವಿರೋಧ ಪಕ್ಷದವರಿಗೆ ಎಲ್ಲರಿಗೂ ತಿಳಿದಿದೆ. ಇಡೀ ದೇಶದಲ್ಲಿ ಸಮಸ್ಯೆಯಿದೆ. ಅವರೆಲ್ಲಾ ಮಾಧ್ಯಮಗಳನ್ನು ನಿಯಂತ್ರಣ ‌ಮಾಡುತ್ತಿದ್ದಾರೆ. ನಾವು ಮುಕ್ತವಾಗಿ ಬಿಟ್ಟಿದ್ದೇವೆ. ದೆಹಲಿ, ಮುಂಬೈ ಸೇರಿದಂತೆ ಎಲ್ಲಿಗೆ ಬೇಕಾದರೂ ಕರೆದುಕೊಂಡು ಹೋಗಿ ರಸ್ತೆಗಳ ಸಮಸ್ಯೆಗಳನ್ನು ನಾವು ತೋರಿಸುವೆ” ಎಂದರು.

“ಜಿಬಿಎ ಮಾಡುವಾಗ ವಿರೋಧ ಪಕ್ಷದವರೂ ಸಹಕಾರ ನೀಡಿದರು. ಈ ಮೊದಲು 198 ವಾರ್ಡ್ ಗಳಿದ್ದವು ಈಗ ಐದು ಪಾಲಿಕೆಗಳಿಂದ 369 ವಾರ್ಡ್ ಗಳಾಗಿವೆ. ಇಷ್ಟು ಬೇಗ ಪಾಲಿಕೆ ವಿಭಜನೆಯಿಂದ ‌ಹಿಡಿದು ಎಲ್ಲಾ ಕೆಲಸಗಳನ್ನು ಮಾಡಲು ಸಾಧ್ಯವೇ ಎಂದು ದೇಶದಾದ್ಯಂತ ಪ್ರಶಂಸೆ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದರು.

“ಜನರ ಬಳಿಗೆ ಸರ್ಕಾರ ಹೋಗಬೇಕು ಎಂದು ಐದು ಪಾಲಿಕೆಗಳನ್ನು ಮಾಡಲಾಗಿದೆ. ಬಿ ಖಾತಾದಿಂದ ಎ ಖಾತೆಗೆ ಬದಲಾವಣೆ ಮಾಡಿಕೊಳ್ಳಲು ಸರ್ಕಾರ ಅತ್ಯುತ್ತಮ ಅವಕಾಶ ನೀಡಿದೆ. ಸಿಎ ನಿವೇಶನಗಳ ಬಗ್ಗೆಯೂ ಪ್ರತ್ಯೇಕ ನೀತಿ ತರಲಾಗುತ್ತಿದೆ. ಗೊಂದಲ ಉಂಟಾಗುವುದು ಬೇಡವೆಂದು ನಗರ ಯೋಜನೆ ಕೆಲಸವನ್ನು ಬಿಡಿಎಯಿಂದ ಜಿಬಿಎಗೆ ನೀಡಲಾಗಿದೆ. ದೊಡ್ಡ ಯೋಜನೆಗಳನ್ನು ಸರ್ಕಾರ ಮಾಡಿದರೆ. ಚಿಕ್ಕ ಕೆಲಸಗಳನ್ನು ಪಾಲಿಕೆಗಳು ಮಾಡುತ್ತವೆ” ಎಂದರು.

“ನಗರದಲ್ಲಿ ನಿತ್ಯ ಮೂರು ಸಾವಿರ ವಾಹನಗಳು ನೋಂದಣಿಯಾಗುತ್ತಿವೆ. ಜನಸಂಖ್ಯೆ 1.40 ಕೋಟಿ ಮುಟ್ಟಿದೆ. 70 ಲಕ್ಷ ‌ಮಂದಿ ಪ್ರತಿದಿನ ಹೊರಗಿನಿಂದ ಬಂದು ಹೋಗುತ್ತಿದ್ದಾರೆ. ಉದ್ಯೋಗ, ಶಿಕ್ಷಣ, ವಹಿವಾಟು, ಉದ್ದಿಮೆ ಹೀಗೆ ಅನೇಕ ಕೆಲಸಗಳಿಗಾಗಿ ಬೆಂಗಳೂರನ್ನು ಅವಲಂಭಿಸಿದ್ದಾರೆ” ಎಂದರು‌.

ಟೆಂಡರ್‌ ಇಲ್ಲದೆ ಐದು ಪಾಲಿಕೆಗಳು 50 ಕೋಟಿ ಖರ್ಚು ಮಾಡಲು ಅವಕಾಶ

“ಐದು ಪಾಲಿಕೆಗಳು ಸೇರಿ 50 ಕೋಟಿ ಮೊತ್ತದ ಕೆಲಸಗಳಿಗೆ ನೇರ ಅನುಮೋದನೆ ನೀಡುವ ಅವಕಾಶ ಕಲ್ಪಿಸಲಾಗಿದೆ. ಟೆಂಡ‌ರ್ ಇಲ್ಲದೇ ಪ್ರತಿ ಪಾಲಿಕೆಯ ಕೌನ್ಸಿಲ್ 10 ಕೋಟಿ ಮೊತ್ತದ ಕಾಮಗಾರಿಗಳಿಗೆ ಹಾಗೂ ಪಾಲಿಕೆ ಆಯುಕ್ತರು 3 ಕೋಟಿ ರೂಪಾಯಿ ಖರ್ಚು ಮಾಡಲು ಅವಕಾಶ ನೀಡಲಾಗಿದೆ. ಬಿಬಿಎಂಪಿ ಇದ್ದಾಗ 10 ಕೋಟಿ ಖರ್ಚು ಮಾಡಬಹುದಾಗಿತ್ತು. ಪಾಲಿಕೆ ಆಯುಕ್ತರ ವೆಚ್ಚ ಮಿತಿಯನ್ನು 1ರಿಂದ 3 ಕೋಟಿಗೆ, ಸ್ಥಾಯಿ ಸಮಿತಿ ವೆಚ್ಚ ಮಿತಿಯನ್ನು 3ರಿಂದ 5 ಕೋಟಿಗೆ, ಪಾಲಿಕೆ ಮೇಯರ್ ವೆಚ್ಚ ಮಿತಿಯನ್ನು 5ರಿಂದ 10 ಕೋಟಿಗೆ ಏರಿಸಲಾಗಿದೆ. ಆಮೂಲಕ ಪಾಲಿಕೆಗಳಿಗೆ ಆರ್ಥಿಕ ಉತ್ತೇಜನ ನೀಡಲಾಗಿದೆ. ನಮ್ಮ ಈ ನಿರ್ಧಾರದಿಂದ ಬಿಜೆಪಿ ನಾಯಕರು ಸಂತೋಷಗೊಂಡಿದ್ದು, ಅದನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿಲ್ಲ. ನೀವು ನಮಗೆ ಸಹಕಾರ ನೀಡಿ” ಎಂದರು.

“ಇಂದು ಸುಮಾರು 180 ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಶಾಂತಿನಗರ ಹೌಸಿಂಗ್ ಸೊಸೈಟಿ, ಸ್ಯಾನಿಟರಿ ಲೈನ್, ಮಳೆ ನೀರು ಪ್ರವಾಹದಿಂದ ತೊಂದರೆಗೆ ಒಳಗಾದ ಪ್ರದೇಶಗಳ ಸಮಸ್ಯೆಗಳು, ಕೋರಮಂಗಲ ಮೆಟ್ರೋ ಮಾರ್ಗ, ಏರ್ ಪೋರ್ಟ್ ಗೆ ನೇರ ಬಸ್ ವ್ಯವಸ್ಥೆ, ಎಸ್ ಟಿಪಿ ಅಳವಡಿಕೆ, ಬೆಳ್ಳಂದೂರು ಕೆರೆ ಸಮಸ್ಯೆ, ಪಾದಚಾರಿ ಮಾರ್ಗ, ಸಿಎ ನಿವೇಶನ, ಸಸಿ ನೆಡುವಿಕೆ ಹೀಗೆ ಹಲವಾರು ವಿಚಾರಗಳ ಬಗ್ಗೆ ನಾಗರಿಕರು ಗಮನ ಸೆಳೆದಿದ್ದಾರೆ” ಎಂದರು.

“ಜನರು ಸರ್ಕಾರದೊಂದಿಗೆ ಕೈ ಜೋಡಿಸಿದರೆ ಮಾತ್ರ ಯಾವುದೇ ಕೆಲಸವನ್ನು ಸರ್ಕಾರ ಪರಿಣಾಮವಾಗಿ ಮಾಡಲು ಸಾಧ್ಯ. ಬೆಂಗಳೂರನ್ನು ನಾನು ಹಾಗೂ ರಾಮಲಿಂಗಾ ರೆಡ್ಡಿ ಅವರು ಮಾತ್ರ ಬದಲಾಯಿಸಲು ಆಗುವುದಿಲ್ಲ. ಸಾರ್ವಜನಿಕರು ನಮಗೆ ಸಹಕಾರ ನೀಡಬೇಕು. ಕಸ ವಿಲೇವಾರಿಯಿಂದ ಹಿಡಿದು ಎಲ್ಲಾ ವಿಚಾರದಲ್ಲೂ ಸರ್ಕಾರದ ಜೊತೆ ಕೈ ಜೋಡಿಸಬೇಕು” ಎಂದರು.

ಬೆಂಗಳೂರಿನ ಅಭಿವೃದ್ಧಿಗೆ 1.04 ಲಕ್ಷ ಕೋಟಿ ಮೊತ್ತದ ಯೋಜನೆಗಳು

“ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಟನಲ್ ರಸ್ತೆ, ಎಲಿವೆಟೆಡ್ ಕಾರಿಡಾರ್, ಡಬಲ್ ಡೆಕ್ಕರ್, ಬಫರ್ ರಸ್ತೆ, ನಗರ ಸೌಂದರ್ಯ ಹೆಚ್ಚಿಸಲು ದೀಪಾಲಂಕಾರ, ಬೀದಿ ದೀಪಗಳಿಗೆ ಎಲ್ ಇಡಿ ಬಲ್ಬ್ ಅಳವಡಿಕೆ ಸೇರಿದಂತೆ, ಮುಂದಿನ ನಾಲ್ಕೈದು ವರ್ಷಗಳಲ್ಲಿ 1.04 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಯೋಜನೆ ರೂಪಿಸಿದ್ದೇವೆ” ಎಂದರು.

“ಜನರ ಬಳಿಗೆ ಸರ್ಕಾರವನ್ನು ಕರೆದೋಯ್ಯಬೇಕು ಎಂಬ ಕಾರಣಕ್ಕೆ ನಾವು ನಗರದಲ್ಲಿ ಐದು ಪಾಲಿಕೆ ರಚಿಸಿದ್ದೇವೆ. ನೀವು ಇಂದು ಕೊಟ್ಟಿರುವ ಅಹವಾಲು ಹಾಗೂ ಸಲಹೆಗಳನ್ನು ನಮ್ಮ ಅಧಿಕಾರಿಗಳು ದಾಖಲಿಸಿಕೊಂಡಿದ್ದು ಅವರು ನಿಮ್ಮನ್ನು ಸಂಪರ್ಕಿಸಲಿದ್ದಾರೆ. ನಿಮ್ಮ ಅಹವಾಲು ಏನೇ ಇದ್ದರು 1533 ಸಹಾಯವಾಣಿಗೆ ಕರೆ ಮಾಡಿ” ಎಂದು ತಿಳಿಸಿದರು.

ಖಾತೆ ಮಾಡಿಸಿಕೊಳ್ಳುವ ಅವಕಾಶ ಕಳೆದುಕೊಳ್ಳಬೇಡಿ:

“ನಿಮ್ಮ ಆಸ್ತಿ ದಾಖಲೆ ಸರಿ ಮಾಡಿಸಿಕೊಳ್ಳಲು ಸರ್ಕಾರ ಉತ್ತಮ ಅವಕಾಶ ಕಲ್ಪಿಸಿದ್ದು, ಎಲ್ಲರೂ ಇ ಖಾತಾ ಮಾಡಿಸಿಕೊಳ್ಳಿ. ಸರ್ಕಾರ ಬಿ ಖಾತೆಯಿಂದ ಎ ಖಾತಾಗೆ ಪರಿವರ್ತನೆ ಮಾಡಲು ಅವಕಾಶ ಕಲ್ಪಿಸಿದ್ದು ಈ ಅವಕಾಶವನ್ನು ಯಾರೂ ಕಳೆದುಕೊಳ್ಳಬೇಡಿ” ಎಂದರು.

“ಸಿಎ ನಿವೇಶನದ ಬಗ್ಗೆ ಸಾರ್ವಜನಿಕರು ಪ್ರಸ್ತಾಪ ಮಾಡಿದ್ದು, ಸರ್ಕಾರ ಈ ವಿಚಾರದಲ್ಲಿ ಪ್ರತ್ಯೇಕ ನೀತಿ ರೂಪಿಸುತ್ತಿದೆ. ಈ ಹಿಂದೆ ಬಿಡಿಎ ನಿಭಾಯಿಸುತ್ತಿದ್ದ ಯೋಜನಾ ಪ್ರಾಧಿಕಾರದ ಜವಾಬ್ದಾರಿಯನ್ನು ಜಿಬಿಎಗೆ ವರ್ಗಾವಣೆ ಮಾಡಿದ್ದೇನೆ. ಬೆಂಗಳೂರಿನಲ್ಲಿ ದೊಡ್ಡ ಯೋಜನೆಗಳನ್ನು ಜಿಬಿಎ ನಿಭಾಯಿಸಲಿದ್ದು, ಉಳಿದ ಸಣ್ಣ ಯೋಜನೆಗಳನ್ನು ಪಾಲಿಕೆಗಳು ಮಾಡಲಿವೆ” ಎಂದರು.

Tags: BreakingNewsDCM DKSKannadaLatestNewsKarnatakaVijayasakshivijayasakshinews
ShareSendShare
Previous Post

ಬಸ್ ನಿಲ್ಲಿಸದ ಚಾಲಕರ ವಿರುದ್ಧ ಪ್ರಯಾಣಿಕರ ಆಕ್ರೋಶ!

Next Post

HDKಗೆ ಅವಮಾನ ಆರೋಪ: ಹಾಸನಾಂಬೆ ದೇಗುಲದ ಬಳಿ JDS ಪ್ರತಿಭಟನೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಕಾಂಗ್ರೆಸ್‌ನಿಂದ ಶಕುನಿ ಯುದ್ಧ: ಕಾಂಗ್ರೆಸ್ ಮೇಲೆ ಜೆಡಿಎಸ್ ಟೀಕಾಪ್ರಹಾರ

HDKಗೆ ಅವಮಾನ ಆರೋಪ: ಹಾಸನಾಂಬೆ ದೇಗುಲದ ಬಳಿ JDS ಪ್ರತಿಭಟನೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕರ್ನಾಟಕದಲ್ಲಿ 15ರಿಂದ 18 ಲಕ್ಷ ಅಕ್ರಮ ವಲಸಿಗರಿರುವ ಶಂಕೆ? ಈವರೆಗೆ 274 ಮಂದಿಯಷ್ಟೇ ಗಡೀಪಾರು!

ಕರ್ನಾಟಕದಲ್ಲಿ 15ರಿಂದ 18 ಲಕ್ಷ ಅಕ್ರಮ ವಲಸಿಗರಿರುವ ಶಂಕೆ? ಈವರೆಗೆ 274 ಮಂದಿಯಷ್ಟೇ ಗಡೀಪಾರು!

November 18, 2026
IMDb ಗ್ಲೋಬಲ್ ಟಾಪ್ 10 ಪಟ್ಟಿಯಲ್ಲಿ ‘ರಾಮಾಯಣ’ಗೆ 3ನೇ ಸ್ಥಾನ: ನೋಲನ್ʼರ ‘ದಿ ಒಡಿಸ್ಸಿ’ ಹಿಂದಿಕ್ಕಿದ ಯಶ್ ಸಿನಿಮಾ!

IMDb ಗ್ಲೋಬಲ್ ಟಾಪ್ 10 ಪಟ್ಟಿಯಲ್ಲಿ ‘ರಾಮಾಯಣ’ಗೆ 3ನೇ ಸ್ಥಾನ: ನೋಲನ್ʼರ ‘ದಿ ಒಡಿಸ್ಸಿ’ ಹಿಂದಿಕ್ಕಿದ ಯಶ್ ಸಿನಿಮಾ!

November 18, 2026
ಕ್ರೀಡಾಪಟುಗಳು ಸೇರಿ ನನ್ನ ಹೆಸರು ಇಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ?: ಪರಮೇಶ್ವರ್ ಪ್ರಶ್ನೆ

ರಾಜ್ಯಾದ್ಯಂತ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆಗೆ ಸರ್ಕಾರ ಚಿಂತನೆ; ಪ್ರದೇಶವಾರು ದರ ಹೆಚ್ಚಳಕ್ಕೆ ಸಿದ್ಧತೆ: ಜಿ. ಪರಮೇಶ್ವರ್

November 18, 2026
ಮೂರು ಬಾರಿ ಎನ್‌ಕೌಂಟರ್‌ನಿಂದ ಪಾರಾಗಿದ್ದ ಲಷ್ಕರ್ ಉಗ್ರ ಲತೀಫ್ ಭಟ್ ಹತ್ಯೆ: ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ

ಮೂರು ಬಾರಿ ಎನ್‌ಕೌಂಟರ್‌ನಿಂದ ಪಾರಾಗಿದ್ದ ಲಷ್ಕರ್ ಉಗ್ರ ಲತೀಫ್ ಭಟ್ ಹತ್ಯೆ: ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ

November 18, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕರ್ನಾಟಕದಲ್ಲಿ 15ರಿಂದ 18 ಲಕ್ಷ ಅಕ್ರಮ ವಲಸಿಗರಿರುವ ಶಂಕೆ? ಈವರೆಗೆ 274 ಮಂದಿಯಷ್ಟೇ ಗಡೀಪಾರು!

ಕರ್ನಾಟಕದಲ್ಲಿ 15ರಿಂದ 18 ಲಕ್ಷ ಅಕ್ರಮ ವಲಸಿಗರಿರುವ ಶಂಕೆ? ಈವರೆಗೆ 274 ಮಂದಿಯಷ್ಟೇ ಗಡೀಪಾರು!

November 18, 2026
IMDb ಗ್ಲೋಬಲ್ ಟಾಪ್ 10 ಪಟ್ಟಿಯಲ್ಲಿ ‘ರಾಮಾಯಣ’ಗೆ 3ನೇ ಸ್ಥಾನ: ನೋಲನ್ʼರ ‘ದಿ ಒಡಿಸ್ಸಿ’ ಹಿಂದಿಕ್ಕಿದ ಯಶ್ ಸಿನಿಮಾ!

IMDb ಗ್ಲೋಬಲ್ ಟಾಪ್ 10 ಪಟ್ಟಿಯಲ್ಲಿ ‘ರಾಮಾಯಣ’ಗೆ 3ನೇ ಸ್ಥಾನ: ನೋಲನ್ʼರ ‘ದಿ ಒಡಿಸ್ಸಿ’ ಹಿಂದಿಕ್ಕಿದ ಯಶ್ ಸಿನಿಮಾ!

November 18, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper