ನಾನು ಯಾವಾಗಲೂ CM ರೇಸ್‌ನಲ್ಲಿ ಇರ್ತೀನಿ: ಪರೋಕ್ಷವಾಗಿ ಸಿಎಂ ಆಸೆ ಬಿಚ್ಚಿಟ್ಟ ಪರಮೇಶ್ವರ್

0
Spread the love

ಬೆಂಗಳೂರು: ನಾನು ಯಾವಾಗಲೂ ಮುಖ್ಯಮಂತ್ರಿ ರೇಸ್‌ನಲ್ಲಿ ಇರ್ತೀನಿ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪರೋಕ್ಷವಾಗಿ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 2013ರಲ್ಲಿ ನಾನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದೇವೆ.

Advertisement

ಆ ಸಂದರ್ಭದಲ್ಲಿ ನಾನು ಚುನಾವಣೆಯಲ್ಲಿ ಪರಾಭವಗೊಂಡಿದ್ದರಿಂದ ಸಿಎಂ ಆಗುವ ಅವಕಾಶ ತಪ್ಪಿತ್ತು. ಸಿಎಂ ಕುರ್ಚಿ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ.

ಖರ್ಗೆಯವರು ಕರ್ನಾಟಕದ ರಾಜಕಾರಣವನ್ನು 50 ವರ್ಷಗಳ ಸುದೀರ್ಘ ಅನುಭವದೊಂದಿಗೆ ಚೆನ್ನಾಗಿ ಬಲ್ಲವರಾಗಿರುವುದರಿಂದ, ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಹಿಂದಿರುಗಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here