ಬೆಂಗಳೂರು: ಕಾಂಗ್ರೆಸ್ ಅವರ ಎಲ್ಲಾ ಆರೋಪಗಳನ್ನು ನೋಟ್ ಮಾಡಿ ಇಟ್ಟುಕೊಂಡಿದ್ದೇನೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಏನೇನು ಮಾತನಾಡುತ್ತಿದ್ದಾರೆ ಎಂದು ನೋಡುತ್ತಿದ್ದೇನೆ. ಕಾಂಗ್ರೆಸ್ ಅವರ ಪರ ಪ್ರಯೋಗ ನೋಡಿದ್ದೇನೆ. ನನ್ನ ಮೇಲೆ ಮತ್ತು ಬಿಜೆಪಿ ನಾಯಕರ ಮೇಲೆ ಆರೋಪ ಟೀಕೆ, ಟಿಪ್ಪಣಿ ಮಾಡುತ್ತಿದ್ದಾರೆ.
ಕಾಂಗ್ರೆಸ್ ಅವರ ಎಲ್ಲಾ ಆರೋಪಗಳನ್ನು ನೋಟ್ ಮಾಡಿ ಇಟ್ಟುಕೊಂಡಿದ್ದೇನೆ. ನವೆಂಬರ್ 13 ರಂದು ಚುನಾವಣೆ ನಡೆಯುತ್ತದೆ. ನವೆಂಬರ್ 23ರಂದು ಫಲಿತಾಂಶ ಬರಲಿದೆ. ಚುನಾವಣೆ ಫಲಿತಾಂಶ ಬಂದ ಬಳಿಕ ಎಲ್ಲರಿಗೂ ನಾನು ಉತ್ತರ ಕೊಡುತ್ತೇನೆ ಎಂದು ಹರಿಹಾಯ್ದರು. ಇನ್ನೂ ದೇವೇಗೌಡರ ಆರೋಗ್ಯದ ಬಗ್ಗೆಯಿಂದ ಹಿಡಿದು, ನಮ್ಮ ಪಕ್ಷದ ನಿರ್ಧಾರಗಳ ಬಗ್ಗೆ ಮಾತಾಡಿದ್ದಾರೆ.
ನಮ್ಮ ಸಮಾಜದ ಹಲವಾರು ನಾಯಕರ ಬಗ್ಗೆ ಮಾತಾಡಿದ್ದಾರೆ. ನಮ್ಮಿಂದ ಅನಾನುಕೂಲಗಳು ಆಗಿವೆ. ಅವರ ಬೆಳವಣಿಗೆಗೆ ತೊಂದರೆ ಅಗಿದೆ ಅಂತ ಹೇಳಿದ್ದಾರೆ. ಕುಮಾರಸ್ವಾಮಿ ಒಬ್ಬರೇ ಒಕ್ಕಲಿಗರಾ? ನಾವೇನು ಒಕ್ಕಲಿಗರು ಅಲ್ಲವಾ ಅಂತ ಮಾತಾಡಿದ್ದಾರೆ. ಎಲ್ಲವನ್ನೂ ನೋಟ್ ಮಾಡಿಕೊಂಡಿದ್ದೇನೆ. ಎಲ್ಲದಕ್ಕೂ ನವೆಂಬರ್ 23ರ ಫಲಿತಾಂಶ ಬರಲಿ. ಆಮೇಲೆ ಮಾತನಾಡುತ್ತೇನೆ ಎಂದು ಕಿಡಿಕಾರಿದರು.