ವಿಜಯಪುರ: ನನ್ನ ವಿರುದ್ಧ ಮಾತನಾಡಿದವರ ಬಣ್ಣ ಬಯಲು ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಸದಾನಂದಗೌಡಗೆ ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾನಂದಗೌಡರು ಯಡಿಯೂರಪ್ಪ ಕುಟುಂಬದ ವಿರುದ್ಧ ಮಾತನಾಡಿರುವುದನ್ನು ನಾನು ಬಿಚ್ಚಿಡುತ್ತೇನೆ. ನನಗಿಂತ ಕೆಟ್ಟದಾಗಿ ಮಾತನಾಡಿದ್ದಾರೆ. ದೀಪ ಆರಿದವರ ಬಗ್ಗೆ ನಾನು ಮಾತನಾಡಲ್ಲ.
Advertisement
ನಿಮ್ಮ ದೀಪ ಈಗಾಗಲೆ ಆರಿಹೋಗಿದೆ. ನಾನು ಯಾರು ಜೊತೆನೂ ಹೊಂದಾಣಿಕೆ ಮಾಡಿಕೊಂಡಿಲ್ಲ. ನನ್ನ ವಿರುದ್ಧ ಮಾತನಾಡಿದವರ ಬಣ್ಣ ಬಯಲು ಮಾಡುತ್ತೇನೆ. ನೀವು ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ಇಲ್ಲ ಎನ್ನುವುದಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಆಣೆಪ್ರಮಾಣಕ್ಕೆ ಪಂಥಾಹ್ವಾನ ನೀಡಿದರು.