ನವದೆಹಲಿ: ನನ್ನ ಆರೋಗ್ಯ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಸಂಸತ್ ನಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಬಗ್ಗೆ ಮಾತನಾಡಿದ್ದೇನೆ. ನನ್ನ ರಾಜ್ಯಸಭೆ ಅವಧಿ 18 ತಿಂಗಳು ಇದೆ, ನನ್ನ ಆರೋಗ್ಯ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ, ಆರೋಗ್ಯ ವ್ಯತಾಸ ಆದರೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
Advertisement
ಹಾಸನದಲ್ಲಿ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಹಾಸನದಲ್ಲಿ ಸಮಾವೇಶದಿಂದ ಜೆಡಿಎಸ್ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಜೆಡಿಎಸ್ ಟಾರ್ಗೆಟ್ ಮಾಡಲೆಂದೇ ಹಾಸನದಲ್ಲಿ ಸಮಾವೇಶ ಮಾಡಿದ್ದಾರೆ. ಅದನ್ನು ಎದುರಿಸುವ ಸಾಮರ್ಥ್ಯ ಜೆಡಿಎಸ್‌ಗೆ ಇದೆ ಇಂದೂ ಎದುರಿಸುತ್ತೇವೆ, ನಾಳೆಯೂ ಎದುರಿಸುತ್ತೇವೆ. ಸಮಾವೇಶದಿಂದ ಏನ್ ಲಾಭ ಒಂದು ದಿನ ಬಂದರು ಮಾತನಾಡಿ ಹೋದರು ಎಂದರು.