HomeKarnataka Newsದೆಹಲಿಯಲ್ಲಿ ಇಂಗ್ಲಿಷ್ʼನಲ್ಲೇ ಪ್ರೆಸ್ಮೀಟ್ ಮಾಡಿ SIR ವಿಚಾರ ಬಹಿರಂಗಪಡಿಸುತ್ತೇನೆ: ರಾಹುಲ್ ಗಾಂಧಿಗೆ ನಿಖಿಲ್ ಸವಾಲ್

ದೆಹಲಿಯಲ್ಲಿ ಇಂಗ್ಲಿಷ್ʼನಲ್ಲೇ ಪ್ರೆಸ್ಮೀಟ್ ಮಾಡಿ SIR ವಿಚಾರ ಬಹಿರಂಗಪಡಿಸುತ್ತೇನೆ: ರಾಹುಲ್ ಗಾಂಧಿಗೆ ನಿಖಿಲ್ ಸವಾಲ್

For Dai;y Updates Join Our whatsapp Group

ರಾಮನಗರ: ರಾಮನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿವೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೂ ಕರ್ನಾಟಕಕ್ಕೆ ಬಂದು ಪರಿಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಅವರು ಸವಾಲು ಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ದೆಹಲಿಯಲ್ಲಿ ಕುಳಿತು ಮತದಾರರ ಪಟ್ಟಿಯ ಅಕ್ರಮಗಳ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ತಮ್ಮದೇ ಪಕ್ಷದ ಸರ್ಕಾರದ ಅವಧಿಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಬಂದು ನೋಡಬೇಕು ಎಂದು ಹೇಳಿದರು. ಅಗತ್ಯವಿದ್ದರೆ ಈ ವಿಚಾರವನ್ನು ದೆಹಲಿಗೆ ತೆಗೆದುಕೊಂಡು ಹೋಗಿ, ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್‌ನಲ್ಲೇ ಪತ್ರಿಕಾಗೋಷ್ಠಿ ನಡೆಸುತ್ತೇನೆ ಎಂದರು.

ರಾಮನಗರದ ಟಿಪ್ಪು ನಗರ, ಯಾರಬ್ ನಗರ ಹಾಗೂ ಮೆಹಬೂಬ್ ನಗರ ವಾರ್ಡ್‌ಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ ಅವರು, ಅಲ್ಲಿನ ಪರಿಸ್ಥಿತಿಯಿಂದ ಕಾರ್ಯಕರ್ತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಆದರೂ ಜೆಡಿಎಸ್ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ವಿಡಿಯೊ ಸಾಕ್ಷ್ಯ ಸಂಗ್ರಹಿಸಿದ್ದಾರೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಜಿಗಳನ್ನು ಹಂಚುವ ಪ್ರಕ್ರಿಯೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಬಿಎಲ್‌ಎ-2 ಪ್ರತಿನಿಧಿಗಳ ಸಮ್ಮುಖದಲ್ಲಿ ಹಾಗೂ ನಿಯಮಾನುಸಾರ ಕ್ರಮ ನಡೆಯಬೇಕು. ಆದರೆ ರಾಮನಗರ ಜಿಲ್ಲಾಡಳಿತ ನಿಯಮಗಳನ್ನು ಪಾಲಿಸದೆ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಆರೋಪಿಸಿದರು.

ಜಿಲ್ಲಾಧಿಕಾರಿಗಳ ನಡೆ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ನಿಖಿಲ್ ಕುಮಾರಸ್ವಾಮಿ, ಪ್ರತಿಭಟನೆಗೆ ಹೆದರಿ ಅವರು ಸ್ಥಳದಲ್ಲಿರದೆ ಮುಖ್ಯಮಂತ್ರಿ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದಾರೆ ಎಂದು ಟೀಕಿಸಿದರು. ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದರು.

ಕುಣಿಗಲ್‌ನಲ್ಲಿಯೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಕೆಲವು ಜನಪ್ರತಿನಿಧಿಗಳು ಬಿಎಲ್‌ಒಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿಯೂ ತಮ್ಮ ವಿರುದ್ಧ ಅಕ್ರಮ ಮತದಾನ ನಡೆದಿದೆ ಎಂದು ಆರೋಪಿಸಿದ ನಿಖಿಲ್ ಕುಮಾರಸ್ವಾಮಿ, ರಾಮನಗರದ ಜನರು ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img