ಬೆಂಗಳೂರು: ಇಕ್ಬಾಲ್ ಹುಸೇನ್’ಗೆ ನಾನು ನೋಟೀಸ್ ಇಶ್ಯೂ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ಇತ್ತೀಚೆಗೆ, “ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಹೇಳಿಕೆ ನೀಡಿದ್ದರು,
Advertisement
ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ಹೇಳಿಕೆಗೆ ನಗರದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಡಿಕೆ ಶಿವಕುಮಾರ್, ಇಕ್ಬಾಲ್ ಹುಸೇನ್ಗೆ ನಾನು ನೋಟೀಸ್ ಇಶ್ಯೂ ಮಾಡುತ್ತೇನೆ.
ಇನ್ಮುಂದೆ ಯಾರೂ ಕೂಡ ಮಾಧ್ಯಮಗಳ ಮುಂದೆ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.ಇನ್ನೂ ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸುತ್ತೇವೆ ಎಂದಿದ್ದಾರೆ.