ಬೆಂಗಳೂರು: ಪ್ರತಿ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಸ್ಸಿಎಸ್ಪಿ/ಟಿಎಸ್ಪಿ ಮೂಲಕ ಎಸ್ಸಿ/ಎಸ್ಟಿ ಮೂಲಕ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಕಾಂಗ್ರೆಸ್ ಸರ್ಕಾರ.
Advertisement
ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತಿ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ ಎಂದು ಹೇಳಿದರು.
ಇನ್ನೂ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲಿ ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆಯನ್ನು ಜಾರಿಗೆ ತಂದಿಲ್ಲ ಏಕೆ? ಎಂದು ಪ್ರಶ್ನಿಸಿದ ಸಿಎಂ, ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಬಿಜೆಪಿಯನ್ನು ಟೀಕಿಸಿದರು.