ತುಮಕೂರು: ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ನಾನ್ಯಾಕೆ ಬಿಜೆಪಿ ಸೇರಲಿ? ಅವಕಾಶ ಇಲ್ಲ ನನಗೆ. ಪಾರ್ಟಿ ನನಗೆ ಏನೂ ಮೋಸ ಮಾಡಿಲ್ಲ. ಯಾವ ಕಾರಣಕ್ಕೂ ನಾನು ಕಾಂಗ್ರೆಸ್ ಬಿಡಲ್ಲ.
Advertisement
ಜನರು ನನಗೆ ಕಾಂಗ್ರೆಸ್, ಬಿಜೆಪಿ ಅಥವಾ ಇಂಡಿಪೆಂಡೆಂಟ್ ನಿಂತರೂ ಮತ ಹಾಕುತ್ತಾರೆ ಎಂದರು. ಇನ್ನೂ ರಾಹುಲ್ ಗಾಂಧಿ ಮತಗಳ್ಳತನ ಹೋರಾಟವನ್ನು ನಾನು ಬೆಂಬಲಿಸುತ್ತೇನೆ. ಸಿದ್ದರಾಮಯ್ಯ ನೇತೃತ್ವ ಇರೋವರೆಗೂ ನನ್ನ ಭವಿಷ್ಯಕ್ಕೆ ತೊಂದರೆ ಇಲ್ಲ ಎಂದು ಹೇಳಿದ್ದಾರೆ.
ನಾನು ಮಾಜಿ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಅದರಿಂದ ಬೇಜಾರಿಲ್ಲ. 35 ಸಾವಿರ ಲೀಡ್‌ನಿಂದ ನಾನು ಗೆದ್ದಿದ್ದೇನೆ. ಈಗ ಚುನಾವಣೆ ಆದರೂ ನಾನೂ ಹೆಚ್ಚು ಮತದಿಂದ ಗೆಲ್ಲುತ್ತೇನೆ. ನಾನು ಭ್ರಷ್ಟಾಚಾರ ಮಾಡಿಲ್ಲ. ಆದರೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟೆ ಎಂದು ಹೇಳಿದ್ದಾರೆ.