HomeKarnataka Newsಬೆಳಗಾವಿಯಲ್ಲಿ ನಾಳೆ ಕಬ್ಬು ಬೆಳೆಗಾರರ ಹೋರಾಟದಲ್ಲಿ ಪಾಲ್ಗೊಳ್ಳುವೆ: ಬಿ.ವೈ.ವಿಜಯೇಂದ್ರ

ಬೆಳಗಾವಿಯಲ್ಲಿ ನಾಳೆ ಕಬ್ಬು ಬೆಳೆಗಾರರ ಹೋರಾಟದಲ್ಲಿ ಪಾಲ್ಗೊಳ್ಳುವೆ: ಬಿ.ವೈ.ವಿಜಯೇಂದ್ರ

For Dai;y Updates Join Our whatsapp Group

ಬೆಂಗಳೂರು: ನಾಳೆ ಬೆಳಗಾವಿಗೆ ತೆರಳಿ ಕಬ್ಬು ಬೆಳೆಗಾರರ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಭಾರತೀಯ ವಿದ್ಯಾಭವನದ ಬಿಜೆಪಿ ಚಿಂತನ ವರ್ಗದಲ್ಲಿ ಇಂದು ಭಾಗವಹಿಸಿದ್ದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಅಲ್ಲದೇ ವಿವಿಧ ಪ್ರಶ್ನೆಗಳಿಗೆ ಉತ್ತರ ನೀಡಿದರು.

ರಾಜ್ಯದಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿವೆ. ಇವುಗಳ ಕಡೆ ರಾಜ್ಯ ಸರಕಾರ ಗಂಭೀರ ಚಿಂತನೆ ಮಾಡುತ್ತಿಲ್ಲ ಎಂದು ಆಕ್ಷೇಪಿಸಿದರು. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕಗಳಲ್ಲಿ ಅತಿವೃಷ್ಟಿಯಿಂದ ರೈತರು ಸಂಕಷ್ಟದಲ್ಲಿದ್ದರು. ನಾವೂ ಪ್ರವಾಸ ಮಾಡಿದ್ದೆವು. ಜಿಲ್ಲಾ ಉಸ್ತುವಾರಿಗಳು ನಾಪತ್ತೆಯಾಗಿದ್ದಾರೆಂದು ಗಮನಕ್ಕೆ ತಂದಿದ್ದೇವೆ ಎಂದು ವಿವರಿಸಿದರು.

ಇಲಾಖಾ ಅಧಿಕಾರಿಗಳೂ ತಲೆ ಕೆಡಿಸಿಕೊಳ್ಳುತ್ತಿಲ್ಲ; ತಕ್ಷಣ ಪರಿಹಾರ ಬಿಡುಗಡೆಗೆ ಒತ್ತಾಯಿಸಿದ್ದೇವೆ. ಆದರೆ, ಸಚಿವರು ಬೆಂಗಳೂರಿನಲ್ಲಿ ಕುಳಿತು ಕೇಂದ್ರ ಸರಕಾರ ಪರಿಹಾರ ಕೊಟ್ಟಿಲ್ಲ ಎಂಬ ಹೇಳಿಕೆಗೆ ಸೀಮಿತ ಮಾಡಿದ್ದಾರೆಯೇ ವಿನಾ, ಸಂಕಷ್ಟದಲ್ಲಿರುವ ರೈತರಿಗೆ ಕಾಂಗ್ರೆಸ್ ಸರಕಾರ ಪರಿಹಾರ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು.

ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಉತ್ತರ ಕನ್ನಡದಲ್ಲೂ ಕಬ್ಬು ಬೆಳೆಗಾರರು ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ, ಸಚಿವರು ತಲೆ ಕೆಡಿಸಿಕೊಂಡಿಲ್ಲ ಎಂದು ಟೀಕಿಸಿದರು. ನಾಳೆ ಬೆಳಗಾವಿಗೆ ತೆರಳಿ ಕಬ್ಬು ಬೆಳೆಗಾರರ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಪ್ರಕಟಿಸಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸಿಲ್ಲವೆಂದು ಅಲ್ಲಿನ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ವಿಷಯದಲ್ಲೂ ರಾಜ್ಯ ಸರಕಾರ ಗಮನ ಹರಿಸುತ್ತಿಲ್ಲ ಎಂದು ದೂರಿದರು. ಒಟ್ಟಾರೆಯಾಗಿ ನಾಡಿನ ರೈತರ ಸಮಸ್ಯೆಗಳ ಬಗ್ಗೆ ಚಕಾರವನ್ನೂ ಎತ್ತದ ಈ ಕಾಂಗ್ರೆಸ್ ಸರಕಾರವು ರೈತರ ವಿಚಾರದಲ್ಲಿ ಕಿಂಚಿತ್ತೂ ಕಾಳಜಿ ತೋರಿಸುತ್ತಿಲ್ಲ; ಇದು ಸರಿಯಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ಸಿನ ಒಳಗೆ ಸಿ.ಎಂ. ಕುರ್ಚಿಗಾಗಿ ಪೈಪೋಟಿ, ಬೀದಿಗಿಳಿದು ಹೊಡೆದಾಟ, ಬಡಿದಾಟ ನಡೆದಿದೆ. ನವೆಂಬರ್ ತಿಂಗಳಿಗೆ ಏನಾಗುತ್ತೋ ಕಾದು ನೋಡೋಣ. ಆದರೆ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕೃಷಿ ಸಚಿವರು, ಕಂದಾಯ ಸಚಿವರು, ಕಬ್ಬು ಬೆಳೆಗಾರರ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಅದು ಸರಕಾರದ ಕರ್ತವ್ಯ ಎಂದು ನುಡಿದರು. ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆ ಕುರಿತು ಮಾತನಾಡದೇ, ಜಗತ್ತು, ದೇಶ, ಸಂಘ ಪರಿವಾರದ ಕುರಿತು ಮಾತನಾಡುತ್ತಿದ್ದಾರೆ. ನಮ್ಮ ಗೃಹ ಸಚಿವರು, ಸಂಘ ಪರಿವಾರದ ಹಿರಿಯರೂ ಉತ್ತರ ಕೊಟ್ಟಿದ್ದಾರೆ ಎಂದು ಈ ಕುರಿತ ಪ್ರಶ್ನೆಗೆ ಉತ್ತರಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img