ವಿಜಯಪುರ: ನಾನು ಪಂಚಮಸಾಲಿ ಸಮಾಜದ ಪರವಾಗಿ ಧ್ವನಿ ಎತ್ತುವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಮಾತನಾಡಿದ ಅವರು, ನಾವು ಯಾವುದೇ ಸರ್ಕಾರದ ವಿರುದ್ದ ಹೋರಾಟ ಮಾಡಿಲ್ಲ. ಸಮಾಜದ ಪರವಾಗಿ ಹೋರಾಟ ಮಾಡಿದ್ದೇವೆ.
ಪಂಚಮಸಾಲಿ ಮೀಸಲಾತಿಗಾಗಿ ನಾನು ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ನಾಲ್ಕು ಬಾರಿ, ಹಾಲಿ ಸಿಎಂ ಸಿದ್ದರಾಮಯ್ಯ ಅವರನ್ನು ಮೂರು ಬಾರಿ ಭೇಟಿಯಾಗಿದ್ದೆ. ಮರ್ಯಾದೆಯ ಹದ್ದಿನಲ್ಲಿ ಹಿಂದೆ ಮಾತನಾಡಿದ್ದೇನೆ. ಮುಂದೆಯೂ ಮಾತನಾಡುವೆ. ಪಂಚಮಸಾಲಿ ಸಮಾಜದ ಪರವಾಗಿ ಧ್ವನಿ ಎತ್ತುವೆ ಎಂದರು.
ಇನ್ನೂ ಬಿಜೆಪಿ ಸರಕಾರದ ಅವಧಿಯಲ್ಲಿ ಉಗ್ರ ಹೋರಾಟ ಮಾಡಿ ಈಗ ಹೋರಾಟ ಮಾಡುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮೊದಲಿನಂತೆ ಹೋರಾಟವಿದೆ. ಸಚಿವೆಯಾದ ಕಾರಣ ಕೆಲಸಗಳ ಒತ್ತಡವಿರುವುದರಿಂದ ಕೆಲ ಹೋರಾಟದಲ್ಲಿ ಭಾಗಿಯಾಗಿಲ್ಲ. ಕೆಲ ಹೋರಾಟಗಳಿಗೆ ನನ್ನ ಸಹೋದರ ಹಾಗೂ ಪುತ್ರನನ್ನು ಕಳುಹಿಸಿದ್ದೇನೆ ಎಂದರು.