HomePolitics Newsಇನ್ನೂ ಒಂದೂವರೆ ವರ್ಷ ಶಾಸಕನಾಗಿರುತ್ತೇನೆ: ವರುಣದಲ್ಲಿ ಸಿದ್ದರಾಮಯ್ಯ ಭಾವುಕ ಭಾಷಣ

ಇನ್ನೂ ಒಂದೂವರೆ ವರ್ಷ ಶಾಸಕನಾಗಿರುತ್ತೇನೆ: ವರುಣದಲ್ಲಿ ಸಿದ್ದರಾಮಯ್ಯ ಭಾವುಕ ಭಾಷಣ

For Dai;y Updates Join Our whatsapp Group

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ತವರು ಕ್ಷೇತ್ರ ವರುಣಕ್ಕೆ ಭೇಟಿ ನೀಡಿದ್ದು, ಈ ವೇಳೆ ಕ್ಷೇತ್ರದ ಜನರೊಂದಿಗೆ ತಮ್ಮ ರಾಜಕೀಯ ಜೀವನದ ನಂಟನ್ನು ಸ್ಮರಿಸಿ ಭಾವುಕವಾಗಿ ಮಾತನಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.

ವರುಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ರಾಜಕೀಯ ಬದುಕಿನಲ್ಲಿ ಕ್ಷೇತ್ರದ ಜನರು ನೀಡಿದ ಬೆಂಬಲವನ್ನು ಸ್ಮರಿಸಿದರು. ವರುಣ ಕ್ಷೇತ್ರದಿಂದ ಮೂರು ಬಾರಿ ಗೆದ್ದಿದ್ದು, ಎರಡು ಬಾರಿ ಮುಖ್ಯಮಂತ್ರಿಯಾಗಲು ಹಾಗೂ ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಲು ಕ್ಷೇತ್ರದ ಜನರ ಆಶೀರ್ವಾದವೇ ಕಾರಣ ಎಂದು ಹೇಳಿದರು.

ತಮ್ಮ ರಾಜಕೀಯ ಶ್ರೇಯಸ್ಸಿಗೆ ವರುಣದ ಮತದಾರರೇ ಪ್ರಮುಖ ಕಾರಣ ಎಂದು ಹೇಳಿದ ಸಿದ್ದರಾಮಯ್ಯ, ಶಾಸಕನಾಗಿರಲಿ ಅಥವಾ ಇಲ್ಲದಿರಲಿ ವರುಣ ಕ್ಷೇತ್ರದ ಜನರ ಸೇವೆಯನ್ನು ಮುಂದುವರಿಸುವುದಾಗಿ ತಿಳಿಸಿದರು. ವರುಣ ಕ್ಷೇತ್ರವನ್ನು ತಾನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದರು.

ತಮ್ಮ ಸುಮಾರು 40 ವರ್ಷಗಳ ರಾಜಕೀಯ ಜೀವನದಲ್ಲಿ ಸೋಲು-ಗೆಲುವು ಎರಡನ್ನೂ ಕಂಡಿದ್ದೇನೆ. ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನುಡಿದಂತೆ ನಡೆದಿದ್ದೇನೆ ಎಂಬ ತೃಪ್ತಿ ಮತ್ತು ಸಂತೋಷ ನನಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ತಾವು ರಾಜ್ಯದಲ್ಲಿ ಒಟ್ಟು ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದ ಅವರು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಯಾವಾಗ ಹೇಳುತ್ತಾರೋ ಆಗ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದಾಗಿ ನಾಲ್ಕೈದು ಬಾರಿ ಹೇಳಿದ್ದೆ. ಅದರಂತೆ ನಡೆದುಕೊಂಡಿದ್ದೇನೆ ಎಂದು ತಿಳಿಸಿದರು.

ಇನ್ನು ತಮ್ಮ ಹಾಲಿ ಶಾಸಕ ಅವಧಿಯ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಇನ್ನೂ ಒಂದೂವರೆ ವರ್ಷ ಶಾಸಕನಾಗಿ ಇರುತ್ತೇನೆ ಎಂದು ಹೇಳಿದರು. ತಮಗೆ ನೀಡಿದಂತೆಯೇ ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ವರುಣದ ಜನರು ಆಶೀರ್ವಾದ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ವರುಣ ಕ್ಷೇತ್ರದ ಜನರು 2028ರ ವಿಧಾನಸಭಾ ಚುನಾವಣೆಯಲ್ಲೂ ಸಿದ್ದರಾಮಯ್ಯ ಅವರೇ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದರು. ಆದರೆ ಈ ಒತ್ತಾಯಕ್ಕೆ ಸಿದ್ದರಾಮಯ್ಯ ಅವರು ಯಾವುದೇ ನೇರ ಪ್ರತಿಕ್ರಿಯೆ ನೀಡದೆ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img