ತುಮಕೂರು: ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನು ಮಂತ್ರಿಗಿರಿ ತೊರೆಯುತ್ತೇನೆ ಎಂದು ಸಚಿವ ಕೆಎನ್ ರಾಜಣ್ಣ ಇಂಗಿತ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಲ್ಲಿ ಕೆಲ ಬದಲಾವಣೆ ತರುವಂತೆ ಹೈಕಮಾಂಡ್‌ಗೆ ಸಲಹೆ ನೀಡಿದ್ದೇನೆ.
ಆಯಾ ಕ್ಷೇತ್ರದಲ್ಲಿ ಶಾಸಕರು ಯಾವ ಸಮುದಾಯಕ್ಕೆ ಸೇರಿರುತ್ತಾರೋ ಆ ಸಮುದಾಯ ಬಿಟ್ಟು ಬೇರೆ ಸಮುದಾಯಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೊಡಬೇಕು ಎಂದು ಸಲಹೆ ನೀಡಿದ್ದೇನೆ.
ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನು ಮಂತ್ರಿಗಿರಿ ತೊರೆಯುತ್ತೇನೆ. ಡಿಕೆಶಿ ಅವರಂತೆ ನನನೂ ಎರಡೆರಡು ಸ್ಥಾನಮಾನ ಕೊಡಿ ಎಂದು ನಾನು ಹೈಕಮಾಂಡ್‌ಗೆ ಕೇಳಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ಮೂರು ತಿಂಗಳೊಳಗೆ ಶೋಷಿತರ ಸಮಾವೇಶ ನಡೆಸಲಿದ್ದು, ಅದರಲ್ಲಿ ದಲಿತ ಸಿಎಂ ವಿಚಾರ ಇರೋದಿಲ್ಲ. ಹೈಕಮಾಂಡ್‌ರಿಂದ ಹಿಡಿದು ಎಲ್ಲರಿಗೂ ಈ ಸಮಾವೇಶಕ್ಕೆ ಆಹ್ವಾನ ನೀಡೋದಾಗಿ ತಿಳಿಸಿದರು.