ಮೈಸೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ನೇಮಕ ವಿಚಾರವಾಗಿ ಪಕ್ಷದ ಮೇಲೆ ಮತ್ತಷ್ಟು ಮುನಿಸುಗೊಂಡ ಮಾಜಿ ಸಚಿವ ವಿ.ಸೋಮಣ್ಣ, ಡಿಸೆಂಬರ್ 6ರ ಬಳಿಕ ತನ್ನ ಮನಸ್ಸಿನ ಭಾವನೆ ತಿಳಿಸುವುದಾಗಿ ಹೇಳಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ.
Advertisement
ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ. ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ, ನಾನೂ ಯಾರನ್ನು ಸಂಪರ್ಕಿಸಿಲ್ಲ ಎಂದರು.