ಮಂಡ್ಯ: ಸರ್ಕಾರ ಕೆಡವಲು ನಮ್ಮ ಶಾಸಕರ ಬಳಿ ಮಾತನಾಡಿ 50 ಕೋಟಿ ಆಫರ್ (Offer) ನೀಡಿ ಬಿಜೆಪಿಗೆ (BJP) ಬಂದರೆ ಮಂತ್ರಿಗಿರಿ ಕೊಡ್ತೀವಿ ಎಂದು ಹೇಳಿದ್ದಾರೆ.
ಹಳೆ ಮೈಸೂರು ಭಾಗದ ಒಬ್ಬ ಎಂಎಲ್‌ಸಿ, ಬೆಳಗಾವಿಯ ಮಾಜಿ ಸಚಿವ ಹಾಗೂ ಸಂತೋಷ್, ಗೋಲ್ಡ್ ಫಿಂಚ್‌ನಲ್ಲಿ ನಮ್ಮ ಶಾಸಕರನ್ನು ಮೀಟ್ ಮಾಡಿದ್ದಾರೆ.
ಎರಡು ದಿನದ ಬಳಿಕ ನಾನು ಸಿಎಂ, ಡಿಸಿಎಂ ಜೊತೆ ಮಾತನಾಡಿ ಮಾಧ್ಯಮದ ಮುಂದೆ ಬರುತ್ತೇನೆ ಎಂದು ಮಂಡ್ಯದಲ್ಲಿ (Mandya) ಶಾಸಕ ಗಣಿಗ ರವಿ ಹೇಳಿದ್ದಾರೆ.
ಶುಕ್ರವಾರ ಹೇಳಿದ್ದನ್ನು ಮತ್ತೆ ರಿಪೀಟ್ ಮಾಡಲು ನಂಗೆ ಇಷ್ಟ ಇಲ್ಲ. ಶಾಸಕರನ್ನು ಸೆಳೆಯಲು ಪ್ರಯತ್ನ ಪಡುತ್ತಿರೋದಕ್ಕೆ ಸಾಕ್ಷಿ ಇದೆ. ಮೂರು ಅಲ್ಲ ಇನ್ನೂ ದೊಡ್ಡ ದೊಡ್ಡ ನಾಯಕರು ಇದ್ದಾರೆ ಅಂತಾ ನಮ್ಮ ಡಿಸಿಎಂ ಹೇಳಿದ್ದಾರೆ. ನನ್ನ ಬಳಿ ಇರೋ ಮಾಹಿತಿಯನ್ನು ಸಿಎಂ, ಡಿಸಿಎಂಗೆ ಹೇಳುತ್ತೇನೆ. ಅವರ ಬಳಿ ಇರುವ ಮಾಹಿತಿ ತೆಗೆದುಕೊಂಡು ಮಾಧ್ಯಮದ ಮುಂದೆ ಬರುತ್ತೇನೆ.
ಒಂದು ವೇಳೆ ನನಗೆ ಆಫರ್ ನೀಡಲು ಬಂದಿದ್ದರೆ ಲೈವ್ ಮಾಡಿ ತೋರಿಸುತ್ತಾ ಇದ್ದೆ. ಸಂತೋಷ್ ಪಕ್ಷಕ್ಕೆ ಕರೆದಿರೋದು ಬೇರೆ ವಿಚಾರ ಅಂತಾ ಈಗಾಗಲೇ ಹೇಳಿದ್ದಾರೆ. ಪಕ್ಷಕ್ಕೆ ಕರೆದಿರೋದು ನಿಜ ಎಂದು ಅವರೇ ಒಪ್ಪಿಕೊಂಡಿದ್ದಾರೆ ಎಂದರು.