ತುಮಕೂರು:- ರೂಂ ಇಲ್ಲಾ ಅಂದಿದಕ್ಕೆ ಐಬಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಪ್ರವಾಸಿ ಮಂದಿರದಲ್ಲಿ ಜರುಗಿದೆ.
ಘಟನೆ ಸಂಬಂಧ ಮಾಜಿ ನಗರಸಭೆ ಸದಸ್ಯ ಸೇರಿ ನಾಲ್ವರ ವಿರುದ್ಧ ಶಿರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರವಾಸಿ ಮಂದಿರದ ಸಿಬ್ಬಂದಿ ಉಮೇಶ್ ಮೇಲೆ ಈ ಹಲ್ಲೆ ನಡೆದಿದ್ದು, ನಟರಾಜು, ಕೋಟೆ ರವಿ, ಹರಿಪ್ರಸಾದ್ ಮತ್ತು ಮಲ್ಲಿಕಾರ್ಜುನ್ ಎಂಬ ಈ ನಾಲ್ವರಿಂದ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಪಾನಮತ್ತರಾಗಿದ್ದ ಈ ನಾಲ್ವರಿಗೂ ರೂಂ ಕೊಡಲು ನಿರಾಕರಿಸಿದ್ದಕ್ಕೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ.
ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



