HomeGadag Newsವಿಕಲಚೇತನರಲ್ಲಿನ ಪ್ರತಿಭೆಯನ್ನು ಗುರುತಿಸಿ ಮುನ್ನಡೆಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ವಿಕಲಚೇತನರಲ್ಲಿನ ಪ್ರತಿಭೆಯನ್ನು ಗುರುತಿಸಿ ಮುನ್ನಡೆಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಿಕಲಚೇತನರಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ವಿಕಲಚೇತನರಿಗೆ ಅನುಕಂಪ ಬೇಕಾಗಿಲ್ಲ. ಅವರಲ್ಲಿ ಮನೋಸ್ಥೈರ್ಯ ತುಂಬಿ ಮುನ್ನಡೆಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ವಿಶ್ವ ವಿಕಲಚೇತನರ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ವಿಕಲಚೇತನರಿಗೆ ಇರುವ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವುದು ಹಾಗೂ ಸಮಾಜದಲ್ಲಿ ಅವರನ್ನು ಗೌರವದಿಂದ ಕಾಣಬೇಕು ಎನ್ನುವ ಉದ್ದೇಶದಿಂದ ಈ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿಕಲಚೇತನರಿಗಿರುವ ಹಕ್ಕುಗಳ ರಕ್ಷಣೆಯಾಗಬೇಕು. ವಿಕಲಚೇತನರ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಈ ಕುರಿತು ಕಾನೂನು ಸೇವಾ ಪ್ರಾಧಿಕಾರದ ವಿಕಲಚೇತನರ ಸಹಾಯವಾಣಿ ಸಂಖ್ಯೆ 15100 ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಸಮಾಜದಲ್ಲಿ ಇತರರ ಜೊತೆ ಅವರು ಸಮಾನವಾಗಿ ಬದುಕುವಂತೆ ನೋಡಿಕೊಳ್ಳಬೇಕು. ವಿಶೇಷ ಚೇತನರಿಗೆ ಸರ್ಕಾರದಿಂದ ಜಾರಿಯಾಗಿರುವ ಸೌಲಭ್ಯಗಳು ದೊರಕಬೇಕು ಎಂದು ತಿಳಿಸಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೆ. ಮಹಾಂತೇಶ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ವಿಕಲಚೇತನರಿಗಾಗಿ 21,414 ಯುಡಿಐಡಿ ಕಾರ್ಡ್ ವಿತರಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ವಿಕಲಚೇತನರು ಸ್ವಾವಲಂಬಿಯಾಗಿ ಬದುಕಲು ಸರ್ಕಾರದಿಂದ ಯಂತ್ರ ಚಾಲಿತ ವಾಹನವನ್ನು ನೀಡಲಾಗುತ್ತಿದೆ. ಸಂಗೀತ ಕ್ಷೇತ್ರದಲ್ಲಿ ಅಂಧರ ಬದುಕಿಗೆ ಪಂಡಿತ ಪುಟ್ಟರಾಜ ಗವಾಯಿಗಳು ದಾರಿದೀಪವಾಗಿದ್ದಾರೆ. ಸರ್ಕಾರದಿಂದ ವಿಕಲಚೇತನರಿಗಾಗಿ ಇರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ವಿಶೇಷ ಸಾಧನೆಗೈದ ವಿಕಲಚೇತನರನ್ನು ಸನ್ಮಾನಿಸಲಾಯಿತು. ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಡಿವೈಎಸ್‌ಪಿ ಮಹಾಂತೇಶ ಸಜ್ಜನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಸಮಾಜ ಕಲ್ಯಾಣ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಎಂ.ಆರ್. ಡಬ್ಲ್ಯೂ, ವಿ.ಆರ್. ಡಬ್ಲ್ಯು, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆ ಮತ್ತು ಸಂಘಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಸ್ವಾಗತಿಸಿದರು. ಬಾಹುಬಲಿ ಜೈನರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವಿಕಲಚೇತನರು ಸ್ವಾವಲಂಬಿಯಾಗಿ ಬದುಕು ಸಾಗಿಸಲು ಹಾಗೂ ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು. ಜಿಲ್ಲೆಯಲ್ಲಿನ ವಿಕಲಚೇತನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಗದಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿಕಲಚೇತನರನ್ನು ಗೌರವದಿಂದ ಕಾಣುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಭಾರತ ದೇಶದಲ್ಲಿನ ಕ್ರಿಡಾಪಟುಗಳಲ್ಲಿ ವಿಕಲಚೇತನ ಕ್ರೀಡಾಪಟುಗಳು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡು ಯಾವುದರಲ್ಲೂ ತಾವು ಕಡಿಮೆ ಇಲ್ಲ ಎಂದು ಸಾಬೀತುಪಡಿಸಿದ್ದಾರೆ.
– ಸಿ.ಎನ್. ಶ್ರೀಧರ್,
ಜಿಲ್ಲಾಧಿಕಾರಿ, ಗದಗ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!