ನಕ್ಸಲರಿಂದ IED ಸ್ಪೋಟ: ಇಬ್ಬರು ಯೋಧರು ಹುತಾತ್ಮ!

0
Spread the love

ರಾಯ್ಪುರ: ನಕ್ಸಲೀಯರು ನಡೆಸಿದ ಸುಧಾರಿತ ಸ್ಫೋಟಕ ಸಾಧನ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾದ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಜರುಗಿದೆ.

Advertisement

ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೇಬಲ್ ಸತೇರ್ ಸಿಂಗ್ ಹುತಾತ್ಮರಾಗಿದ್ದಾರೆ. ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೇಬಲ್ ಸತೇರ್ ಸಿಂಗ್ ಹುತಾತ್ಮರಾಗಿದ್ದಾರೆ.

ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಕಳೆದ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಪೈಪ್ ಬಾಂಬ್ ಸ್ಫೋಟಗೊಂಡಿದೆ.

ಗಾಯಗೊಂಡ ಯೋಧರು ಪುರುಷೋತ್ತಮ್ ನಾಗ್, ಕೋಮಲ್ ಯಾದವ್, ಸಿಯಾರಾಮ್ ಸೋರಿ ಮತ್ತು ಸಂಜಯ್ ಕುಮಾರ್ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತಮ ವೈದ್ಯಕೀಯ ಆರೈಕೆಗಾಗಿ ಅವರನ್ನು ರಾಯ್‌ಪುರಕ್ಕೆ ವಿಮಾನದಲ್ಲಿ ಸಾಗಿಸಲು ಸಿದ್ಧತೆ ನಡೆಸಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here