ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೆಹಲಿಯನ್ನೂ ದಿವಾಳಿ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೆಹಲಿಯಲ್ಲಿ ಮಹಿಳೆಯರಿಗೆ ಪ್ಯಾರಿದೀದಿ ಯೋಜನೆ ಘೋಷಣೆ ಮಾಡಿರುವುದರಿಂದ ಅಲ್ಲಿನ ಜನರು ನಂಬುವುದಿಲ್ಲ.
ಈಗಾಗಲೇ ಗ್ಯಾರಂಟಿ ಹೆಸರಿನಲ್ಲಿ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕವನ್ನು ದಿವಾಳಿ ಮಾಡಿದ್ದಾರೆ. ಅವರು ಅಧಿಕಾರಕ್ಕೆ ಬಂದರೆ ದೆಹಲಿಯನ್ನೂ ದಿವಾಳಿ ಮಾಡುತ್ತಾರೆ. ಹೀಗಾಗಿ ಜನರು ಕಾಂಗ್ರೆಸನ್ನು ನಂಬುವುದಿಲ್ಲ ಎಂದರು.
ಇನ್ನೂ ಬಿಜೆಪಿಯಲ್ಲೂ ಭೋಜನ ಕೂಟ ನಡೆಯುತ್ತಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಆಗಾಗ ಒಟ್ಟಿಗೆ ಊಟ ಮಾಡುತ್ತೇವೆ. ಅದರಲ್ಲಿ ಮಹತ್ವ ಏನು ಇಲ್ಲ. ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳ ಬಗ್ಗೆ ಪಕ್ಷದ ಹೈಕಮಾಂಡ್ ಗಮನ ಹರಿಸಿದೆ. ಈ ತಿಂಗಳಲ್ಲಿ ಸರಿ ಹೋಗಲಿದೆ. ಒಳ್ಳೆಯ ರೀತಿಯಲ್ಲಿ ಎಲ್ಲವೂ ಬಗೆಹರಿಯುವ ವಾತಾವರಣವನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದರು.