ಉತ್ತರ ಪ್ರದೇಶ: ಹಿಂದೂಗಳು ಸೇಫಾಗಿದ್ದರೆ, ಮುಸ್ಲಿಮರೂ ಸೇಫಾಗಿರುತ್ತಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪಾಡ್‌ಕಾಸ್ಟ್ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಹಿಂದೂಗಳು ಸೇಫಾಗಿದ್ದರೆ, ಮುಸ್ಲಿಮರೂ ಸೇಫಾಗಿರುತ್ತಾರೆ. 100 ಹಿಂದೂ ಕುಟುಂಬಗಳ ನಡುವೆ ಒಂದು ಮುಸ್ಲಿಂ ಕುಟುಂಬ ಭದ್ರವಾಗಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಎಲ್ಲಾ ಧರ್ಮದ ಜನ ಸುರಕ್ಷಿತವಾಗಿದ್ದಾರೆ. ಅವರಿಗೆ ಎಲ್ಲಾ ಧಾರ್ಮಿಕ ಪದ್ದತಿಗಳನ್ನು ಆಚರಿಸುವ ಸ್ವಾತಂತ್ರ್ಯವಿದೆ. 100 ಹಿಂದೂ ಕುಟುಂಬಳ ನಡುವೆ ಒಂದು ಮುಸ್ಲಿಂ ಕುಟುಂಬ ಭದ್ರವಾಗಿದೆ. ಆದ್ರೆ 100 ಮುಸ್ಲಿಂ ಕುಟುಂಬಗಳ ನಡುವೆ 50 ಹಿಂದೂ ಕುಟುಂಬಗಳಿದ್ದರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ.
ಹಿಂದೂ ಆಡಳಿತಗಾರರು ಇತರರ ಮೇಲೆ ಅಧಿಪತ್ಯ ಸ್ಥಾಪಿಸಿದ ಉದಾಹರಣೆ ವಿಶ್ವ ಇತಿಹಾಸದಲ್ಲಿ ಇಲ್ಲ. ಇದಕ್ಕೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವೇ ಕಾರಣ, ಇದಕ್ಕೂ ಮುನ್ನ ಪಾಕಿಸ್ತಾನದಲ್ಲೂ ಈ ಉದಾಹರಣೆ ಇತ್ತು. ಅಫ್ಘಾನಿಸ್ತಾನದಲ್ಲೂ ಏನಾಯ್ತು ಅನ್ನೋದು ನಮಗೆ ಗೊತ್ತಿದೆ ಎಂದು ಹೇಳಿದರು.