HomeKarnataka Newsನಾನು CM ಆದ್ರೆ ಮೊದಲ ಕ್ಯಾಬಿನೆಟ್ʼನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ: ಯತ್ನಾಳ್

ನಾನು CM ಆದ್ರೆ ಮೊದಲ ಕ್ಯಾಬಿನೆಟ್ʼನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ: ಯತ್ನಾಳ್

For Dai;y Updates Join Our whatsapp Group

Spread the love

ವಿಜಯಪುರ: ನಾನು ಮುಖ್ಯಮಂತ್ರಿ ಆದರೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತರ ಪಟ್ಟಿಯಿಂದ ಹೊರಹಾಕುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹನುಮ ಜಯಂತಿ ಸಂದರ್ಭದಲ್ಲಿ ಆಂಜನೇಯನ ಸನ್ನಿಧಿಯಲ್ಲಿ ನಿಂತು ಈ ಮಾತುಗಳನ್ನು ಹೇಳುತ್ತಿದ್ದೇನೆ ಎಂದರು. ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಿ ಎಂದು ಕೇಳುವುದಿಲ್ಲ. ಅವರೇ ನನ್ನನ್ನು ಪಕ್ಷಕ್ಕೆ ಆಹ್ವಾನಿಸುತ್ತಾರೆ ಎಂದು ಹೇಳಿದರು.

ಮುಂದುವರಿದು, ಮುಖ್ಯಮಂತ್ರಿ ಆದರೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಮಾದರಿಯಲ್ಲಿ ಆಡಳಿತ ನಡೆಸುತ್ತೇನೆ ಎಂದರು. ಮೊದಲ ಸಚಿವ ಸಂಪುಟದಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತರ ಪಟ್ಟಿಯಿಂದ ಹೊರಹಾಕುವುದಾಗಿ ಪುನರುಚ್ಚರಿಸಿದರು. ಮರಾಠರು, ಬ್ರಾಹ್ಮಣರು, ಕ್ಷತ್ರಿಯರು ಸೇರಿದಂತೆ ಇತರ ಸಮುದಾಯಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರವನ್ನೂ ಪ್ರಸ್ತಾಪಿಸಿದರು.

ಇದೇ ವೇಳೆ, ವೀರಣ್ಣ ಚರಂತಿಮಠ ನನ್ನ ಆತ್ಮೀಯರು. ಬಾಗಲಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರಕ್ಕೆ ಕರೆದಿದ್ದಾರೆ. ಅದಕ್ಕಾಗಿ ನಾನು ಚರಂತಿಮಠ ಅವರ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದರು.

ಯಾವುದೇ ನಾಟಕ ಮಾಡಿ ಬಿಜೆಪಿಗೆ ಸೇರುವ ಅವಶ್ಯಕತೆ ಇಲ್ಲ ಎಂದು ಹೇಳಿದ ಅವರು, ಸಚಿವ ಎಂ.ಬಿ. ಪಾಟೀಲ್ ಅವರ ವಿರುದ್ಧವೂ ಟೀಕೆ ಮಾಡಿದರು. ಸ್ವಾಭಿಮಾನ ಇದ್ದರೆ ಬಾಗೇವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಬಾರದು ಎಂದು ಅವರು ಹೇಳಿದರು. ಅಲ್ಲದೆ, ಬಾಗೇವಾಡಿ ಕಾಂಗ್ರೆಸ್ ಅಭ್ಯರ್ಥಿ ರಾತ್ರಿ ವೇಳೆ ಬಂದು ಎಂ.ಬಿ. ಪಾಟೀಲ್ ವಿರುದ್ಧ ಪ್ರಚಾರ ಮಾಡುತ್ತಾನೆ ಎಂದು ಆರೋಪಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!