HomeKarnataka Newsಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

For Dai;y Updates Join Our whatsapp Group

Spread the love

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ” ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ನೀವು ಶಸ್ತ್ರತ್ಯಾಗ ಮಾಡಿದ್ದೀರಾ ಎಂದು ಕೇಳಿದಾಗ, “ತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ ಹೇಳಿದ್ದೆ. ಶಸ್ತ್ರವೇ ಇಲ್ಲದಿದ್ದಾಗ ಶಸ್ತ್ರತ್ಯಾಗದ ಪ್ರಶ್ನೆಯೇ ಬಾರದು” ಎಂದು ಕೇಳಿದರು.

ತಾಳ್ಮೆಯ ಅಸ್ತ್ರ ಇದೆ ಎಂದಿದ್ದೀರಿ ಎಂದಾಗ, “ಈಗಲೂ ತಾಳ್ಮೆ ಇರಲಿ ಎಂದು ಹೇಳುತ್ತಿದ್ದೇನೆ” ಎಂದರು. ಶಸ್ತ್ರ, ತಂತ್ರ, ಯುದ್ಧ ಇಲ್ಲದೇ ಬಗೆಹರಿಯುವುದೇ ಎಂದಾಗ, “ಇದು ರಾಜಕಾರಣ. ಇಲ್ಲಿ ಶಸ್ತ್ರ ಹಾಗೂ ಅಸ್ತ್ರ ಬೇಕಾಗಿಲ್ಲ” ಎಂದರು.

ಶಾಸಕರ ದೆಹಲಿ ಯಾತ್ರೆ ವಿಚಾರ ನನಗೆ ಗೊತ್ತಿಲ್ಲ

ಶಾಸಕರು ದೆಹಲಿಗೆ ತೆರಳಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ನಾಯಕರನ್ನು ಕೇಳುವ ಬಗ್ಗೆ ಪ್ರಶ್ನಿಸಿದಾಗ, “ಶಾಸಕರು ದೆಹಲಿಗೆ ಹೋಗುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಶಾಸಕರನ್ನೇ ಕೇಳಿ” ಎಂದರು.

ಭೋಜನಕೂಟ ಸೇರಿದ ಶಾಸಕರು ನಾಯಕತ್ವದ ವಿಚಾರದಲ್ಲಿ ಸ್ಪಷ್ಟನೆ ಕೇಳಿದ್ದಾರೆ ಎಂದಾಗ, “ನಾನು ಊರಲ್ಲಿ ಇರಲಿಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಅವರು ಯಾವ ತೀರ್ಮಾನ ಕೈಗೊಂಡಿದ್ದಾರೆ, ಯಾವ ಹೇಳಿಕೆ ಕೊಟ್ಟಿದ್ದಾರೆ ಎಂಬುದೂ ಗೊತ್ತಿಲ್ಲ. ಇದು ಅವರ ವೈಯಕ್ತಿಕ ವಿಚಾರ. ಪಕ್ಷ ಅದನ್ನು ಗಮನಿಸಲಿದೆ” ಎಂದು ತಿಳಿಸಿದರು.

ಹೀಗೆ ಆದರೆ 2028ರ ಚುನಾವಣೆ ಪಕ್ಷಕ್ಕೆ ಕಷ್ಟವಾಗಲಿದೆ ಎಂದಾಗ, “ಚುನಾವಣೆಗೆ ಸ್ಪರ್ಧಿಸುವವರಿಗೆ ಕಷ್ಟವಾಗಬಹುದು. ನನಗೆ ಕಷ್ಟ ಆಗುವುದಿಲ್ಲ. ಈ ಬಗ್ಗೆ ನಾನೇಗೆ ಹೇಳಲಿ” ಎಂದು ತಿಳಿಸಿದರು.

ಶಾಸಕರ ಆಗ್ರಹದಲ್ಲಿ ನ್ಯಾಯ ಇದೆ ಅಲ್ಲವೇ ಎಂದು ಕೇಳಿದಾಗ, “ಶಾಸಕರ ವಿಚಾರಧಾರೆ ಅವರಿಗೆ ಹಾಗೂ ಸಂಬಂಧಿಸಿದ್ದೇ ಹೊರತು, ನನಗಲ್ಲ. ಪಕ್ಷ ಅವರ ವಿಚಾರಗಳನ್ನು ಗಮನಿಸಲಿದೆ. ನಾವು ಆ ವಿಚಾರದಲ್ಲಿ ಹೇಳಲು ಬರುವುದಿಲ್ಲ” ಎಂದರು.

ಶಿವಕುಮಾರ್ ಅವರು ಪಕ್ಷ ನನ್ನನ್ನು ಗಮನಿಸಲಿದೆ ಎಂದು ಹೇಳುತ್ತಲೇ ಇದ್ದಾರೆ ಎಂದಾಗ, “ಎಲ್ಲದಕ್ಕೂ ತಾಳ್ಮೆ ಇರಲಿ” ಎಂದರು. ಸಿದ್ದರಾಮಯ್ಯ ಅವರನ್ನು ಬದಲಿಸುವುದಾದರೆ ದಲಿತ ಸಿಎಂ ಮಾಡಬೇಕು ಎಂಬ ಹೆಚ್.ಸಿ ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಎಲ್ಲರಿಗೂ ಆಸೆ ಇದೆ. ಇದರಲ್ಲಿ ತಪ್ಪೇನಿಲ್ಲ” ಎಂದರು.

ನಿಮ್ಮ ಸಹೋದರರನ್ನು ಸಿಎಂ ಹುದ್ದೆಯಲ್ಲಿ ಕೂರಿಸಲು ನಿಮ್ಮ ಪ್ರಯತ್ನ ಹೇಗಿದೆ, ನಿಮ್ಮ ಬಳಿ ಶಾಸಕರ ಸಂಖ್ಯೆ ಹೆಚ್ಚಾಗಿದೆಯೇ ಎಂದು ಕೇಳಿದಾಗ, “ನನಗೆ ಆ ಬಗ್ಗೆ ಗೊತ್ತಿಲ್ಲ. ಶಾಸಕರ ವಿಚಾರ ಬಿಟ್ಟು ಬಮೂಲ್ ವಿಚಾರ ಏನಾದರೂ ಇದ್ದರೆ ಕೇಳಿ, ಪ್ರತಿಕ್ರಿಯೆ ನೀಡುವೆ’ ಎಂದರು.

ಪಕ್ಷದಿಂದ ಕೆಎಂಎಫ್ ಚುನಾವಣೆ ಅಭ್ಯರ್ಥಿ ಆಯ್ಕೆ

ಮಾರ್ಚ್ 6 ರಂದು ಕೆಎಂಎಫ್ ಚುನಾವಣೆ ನಡೆಯಲಿದೆಯೇ ಎಂದು ಕೇಳಿದಾಗ, “ಚುನಾವಣೆ ಯಾವಾಗ ಮಾಡಬೇಕು ಎಂದು ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಆಗ ಪಕ್ಷ ತೀರ್ಮಾನ ಮಾಡುವ ವ್ಯಕ್ತಿಯೇ ಸ್ಪರ್ಧೆ ಮಾಡಲಿದ್ದಾರೆ” ಎಂದರು.

ನೀವು ಕೆಎಂಎಫ್ ಚುನಾವಣೆ ಆಕಾಂಕ್ಷಿ ಎಂದಾಗ, “ನಾನು ಯಾವುದಕ್ಕೂ ಆಕಾಂಕ್ಷಿ ಅಲ್ಲ” ಎಂದರು. ರಾಜ್ಯಸಭೆಗೆ ಹೋಗುವ ಪ್ರಯತ್ನ ಇದೆಯೇ ಎಂದಾಗ, “ಇಲ್ಲ, ಅದರ ಬಗ್ಗೆ ನನಗೆ ಗೊತ್ತಿಲ್ಲ. ನಾನು ರಾಜಕೀಯ ಪಂಡಿತನಲ್ಲ” ಎಂದರು.ನನ್ನ ಪರವಾಗಿ ಯಾರು ದೆಹಲಿಗೆ ಹೋಗುವುದು ಬೇಡ ಎಂದು ಡಿಸಿಎಂ ಅವರು ಹೇಳಿರುವ ಬಗ್ಗೆ ಕೇಳಿದಾಗ, “ನಾನು ಶಿವಕುಮಾರ್ ಅವರನ್ನು ಭೇಟಿ ಮಾಡಿಲ್ಲ. ಹೀಗಾಗಿ ಈ ವಿಚಾರ ನನಗೆ ಗೊತ್ತಿಲ್ಲ” ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!