HomeKarnataka Newsಕಮಲ್ ಹಾಸನ್ ಕ್ಷಮೆ ಕೇಳದೇ ಇದ್ರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಬಿಡಲ್ಲ: ಸಾರಾ...

ಕಮಲ್ ಹಾಸನ್ ಕ್ಷಮೆ ಕೇಳದೇ ಇದ್ರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಬಿಡಲ್ಲ: ಸಾರಾ ಗೋವಿಂದು

For Dai;y Updates Join Our whatsapp Group

Spread the love

ಬೆಂಗಳೂರು: ಕಮಲ್ ಹಾಸನ್ ಕ್ಷಮೆ ಕೇಳದೇ ಇದ್ರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಬಿಡಲ್ಲ ಎಂದು ನಿರ್ಮಾಪಕ ಸಾರಾ ಗೋವಿಂದು ಹೇಳಿದ್ದಾರೆ. ತಮಿಳು ನಟ ಕಮಲ್ ಹಾಸನ್ ಶಿವಣ್ಣನ ಮುಂದೆಯೇತಮಿಳಿನಿಂದ ಕನ್ನಡ ಹುಟ್ಟಿದೆಅಂತ ಹೇಳೋ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ವಿಚಾರವಾಗಿ ಮಾತನಾಡಿದ ಅವರು, ಕಮಲ್ ಹಾಸನ್ ಬಗ್ಗೆ ನಮಗೆ ಯಾರಿಗೂ ಕನಿಕರ ಇಲ್ಲ. ಇವತ್ತು ಅಥವಾ ನಾಳೆ ಒಳಗೆ ಕಮಲ್ ಹಾಸನ್ ಕ್ಷಮೆ ಕೇಳದೇ ಇದ್ರೆ ಖಂಡನೆ ಮಾಡ್ತೀವಿ. ಕಮಲ್ ಹಾಸನ್ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಮಾಡಿಕೊಡಲ್ಲ ಅಂತ ಎಚ್ಚೆರಿಕೆ ನೀಡಿದ್ದಾರೆ.

ಇನ್ನೂ ಫಿಲ್ಮ್ಚೇಂಬರ್ಅಧ್ಯಕ್ಷ ನರಸಿಂಹಲು ಮಾತನಾಡಿ, ಕನ್ನಡ ರಕ್ಷಣಾ ವೇದಿಕೆಯವರು, ಹಲವಾರು ಸಂಘ ಸಂಸ್ಥೆಗಳು ಖಂಡಿಸಿದ್ದಾರೆ. ಸಿನಿಮಾ ಬ್ಯಾನ್ ಮಾಡ್ಬೇಕು ಅಂತಾ ಪಟ್ಟು ಹಿಡಿದಿದ್ದಾರೆ. ಕಮಲ್ ಹಾಸನ್ ಕ್ಷಮೆ ಕೇಳ್ಬೇಕು ಅಂತಾ ಒತ್ತಾಯಿಸಿದ್ದಾರೆ. ಕಮಲ್ ಹಾಸನ್ ಮಾಡಿರುವ ತಪ್ಪನ್ನ ಮನವರಿಕೆ ಮಾಡಿಸಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡ್ತೀವಿ ಅಂತ ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!