ಬೆಂಗಳೂರು: ನಮ್ಮ ಅವಧಿಯಲ್ಲಿ ರೈತರಿಗೆ ನೋಟಿಸ್ ಕೊಟ್ಟಿದ್ದರೆ ಕ್ರಮ ಆಗಲಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಅವಧಿಯಲ್ಲಿ ತಪ್ಪಾಗಿದ್ದರೂ ಕ್ರಮ ಆಗಲಿ. ಕಾಂಗ್ರೆಸ್ ಅವಧಿಯಲ್ಲಿ ತಪ್ಪಾಗಿದ್ದರೂ ಕ್ರಮ ಆಗಲಿ ಎಂದರು.
ಇನ್ನೂ ನಾವೇನು ಅಧಿಕಾರಿಗಳ ರಕ್ಷಣೆ ಮಾಡುತ್ತಿಲ್ಲ. ನಮ್ಮ ಅವಧಿಯಲ್ಲಿ ಅಥವಾ ಕಾಂಗ್ರೆಸ್ ಅವಧಿಯಲ್ಲಿ ಅಧಿಕಾರಿಗಳು ತಪ್ಪಾಗಿ ವಕ್ಫ್ ನೋಟಿಸ್ ಕೊಟ್ಟಿದ್ದರೆ ಕ್ರಮ ಆಗಲಿ. ಈಗ ಪ್ರಶ್ನೆಯಾಗಿರುವುದು ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆದರೆ ಇದು ತಪ್ಪು.
ಕಾಂಗ್ರೆಸ್ ಅವಧಿಯಲ್ಲಿ ರೈತರಿಗೆ ನೋಟಿಸ್ ಕೊಡುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಮಾನ್ಪಾಡಿ ವರದಿಯಲ್ಲಿ ಕಾಂಗ್ರೆಸ್ ನಾಯಕರು ಒತ್ತುವರಿ ಮಾಡಿಕೊಂಡಿದ್ದರರು. ಅದಕ್ಕೆ ನೋಟಿಸ್ ಕೊಟ್ಟಿದ್ದೇವೆ. ನಮ್ಮ ಕಾಲದಲ್ಲಿ ರೈತರಿಗೆ ನೋಟಿಸ್ ಕೊಟ್ಟಿದ್ದರೆ ಅದೂ ತಪು ಎಂದು ಕಿಡಿಕಾರಿದರು.



