ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ

0
Spread the love

ಬೆಂಗಳೂರು ನ 24: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

Advertisement

ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು. ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಇದು ಕಣ್ಣ ಮುಂದಿದೆ. ಆದರ ದಾಖಲೆ ಕಣ್ಣ ಮುಂದಿದೆ. ಬಿಜೆಪಿಯವರು ನಿರ್ಲಜ್ಜವಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು.

ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ದಾಖಲೆಗಳು ಕಣ್ಣ ಮುಂದಿವೆ. ಆದರೂ ಈ ಬಿಜೆಪಿ ನಾಯಕರು ಯಾಕಿಷ್ಟು ಸುಳ್ಳು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಸೇರಿದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಹೊಟ್ಟೆಕಿಚ್ಚಿನ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಇದು ಬಿಜೆಪಿಯವರ ಹೊಟ್ಟಿಕಿಚ್ಚಿಗೆ ಕಾರಣವಾಗಿದೆ ಎಂದು ವಿವರಿಸಿದರು. ಜತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಗಿ ಪ್ರಶ್ನಿಸಿದರು.


Spread the love

LEAVE A REPLY

Please enter your comment!
Please enter your name here