HomeGadag Newsಧರ್ಮವನ್ನು ರಕ್ಷಿಸಿದಲ್ಲಿ ಮನುಕುಲಕ್ಕೆ ಶಾಂತಿ

ಧರ್ಮವನ್ನು ರಕ್ಷಿಸಿದಲ್ಲಿ ಮನುಕುಲಕ್ಕೆ ಶಾಂತಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮದ ಮಹಾನ್ ಶರಣ ಮತ್ತು ಗುರುಗಳಲ್ಲಿ ಒಬ್ಬರು. ಇವರ ತತ್ವ, ಬದುಕಿನ ಚರಿತ್ರೆ, ಮತ್ತು ಧಾರ್ಮಿಕ ಸಾಧನೆಗಳು ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನವನ್ನು ಪಡೆದಿವೆ. ಅವರ ತತ್ವ-ಸಿದ್ಧಾಂತಗಳು ಸರ್ವಕಾಲಕ್ಕೂ ಶ್ರೇಷ್ಠವಾಗಿವೆ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರು ಹಾಗೂ ಅಖಿಲ ಭಾರತ ಶಿವಾಚಾರ್ಯರ ಸಂಘದ ಅಧ್ಯಕ್ಷರೂ ಆಗಿರುವ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.

ಅವರು ಸೋಮವಾರ ಪಟ್ಟಣದ ಶ್ರೀ ರಂಭಾಪುರಿ ಜ. ವೀರಗಂಗಾಧರ ಸಮುದಾಯ ಭವನದಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಹಾಗೂ ಧರ್ಮಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡುತ್ತಿದ್ದರು.

ಮಾನವ ಧರ್ಮ ಪಂಚಾಚಾರ್ಯ ಜಗದ್ಗುರುಗಳ ಧರ್ಮವಾಗಿದೆ. ಮಾನವ ಧರ್ಮವನ್ನು ರಕ್ಷಿಸಿದಲ್ಲಿ ಮನುಕುಲಕ್ಕೆ ಶಾಂತಿ ಸಿಗುವುದು. ಈ ನಿಟ್ಟಿನಲ್ಲಿ ಜಗದ್ಗುರು ರೇಣುಕಾಚಾರ್ಯರು ಮನುಷ್ಯ ಕುಲಕ್ಕೆ ಮಾಡಿದ ಮಹಾನ್ ಕಾರ್ಯ ಎಂದೆಂದಿಗೂ ಸ್ಮರಣೀಯವಾಗಿರುತ್ತದೆ. ವೀರಶೈವ ಧರ್ಮ ಅತ್ಯಂತ ಪ್ರಾಚೀನ. ಇದರ ಇತಿಹಾಸ ಮತ್ತು ಪರಂಪರೆ ಅಪೂರ್ವ-ಅಮೋಘ. ಕಾಯಕ ಮತ್ತು ದಾಸೋಹ ಭಾವನೆಗಳನ್ನು ಬೆಳೆಸಿದ ಶ್ರೇಯಸ್ಸು ವೀರಶೈವ ಧರ್ಮಕ್ಕಿದೆ. ಮಾನವ ಧರ್ಮವೇ ಶ್ರೇಷ್ಠವೆಂದು ಸಾರಿದ ಜಗದ್ಗುರು ರೇಣುಕಾಚಾರ್ಯರ ಆದರ್ಶ ಚಿಂತನೆಗಳು ಮುಂದಿನ ಪೀಳಿಗೆಗೂ ದಾರಿದೀಪವಾಗಿವೆ ಎಂದರು.

ನೇತೃತ್ವ ವಹಿಸಿದ್ದ ಕರೇವಾಡಿಮಠದ ಶ್ರೀ ಮಳೆಮಲ್ಲಿಕಾರ್ಜುನ ಶ್ರೀಗಳು ಮಾತನಾಡಿ, ಶ್ರೀ ರೇಣುಕರು ಅನುಗ್ರಹಿಸಿದ ಶಿವಾದ್ವೈತ ಸಿದ್ಧಾಂತ ಸಾರವೇ ವೀರಶೈವ ಧರ್ಮವಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕರಾದ ಜಿ.ಎಮ್. ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ಚನ್ನಪ್ಪ ಕೋಲಕಾರ, ಆನಂದ ಮೆಕ್ಕಿ, ಚಂಬಣ್ಣ ಬಾಳಿಕಾಯಿ, ಜಿ.ಎಸ್. ಬಾಳಿಹಳ್ಳಿಮಠ, ಬಿ.ಟಿ. ಪಾಟೀಲ, ಮುರಗಯ್ಯ ಹಿರೇಮಠ, ರುದ್ರು ಘಂಟಾಮಠ, ಗುರುಲಿಂಗಯ್ಯ ಹಿರೇಮಠ, ಬಸವೇಶ ಮಹಾಂತಶೆಟ್ಟರ, ಗುರಣ್ಣ ಪಾಟೀಲಕುಲಕರ್ಣಿ, ಬಸವರಾಜ ಮೆಣಸಿನಕಾಯಿ, ಅಶ್ವಿನಿ ಅಂಕಲಕೋಟಿ, ನಿಂಗಪ್ಪ ಜಾವೂರ, ಶಿವಯೋಗಿ ಅಂಕಲಕೋಟಿ, ಬಸಣ್ಣ ಬೆಂಡಿಗೇರಿ, ಜಿ.ಆರ್. ಲಕ್ಕುಂಡಿಮಠ, ಹೇಮಗೀರಿಮಠ, ನಿಂಗಪ್ಪ ಬನ್ನಿ, ಶಿವಲಿಂಗಯ್ಯ ಹಾಲೇವಾಡಿಮಠ, ಎಸ್.ವಿ. ಅಂಗಡಿ, ಆನಂದ ಸೇರಿದಂತೆ ಅನೇಕರಿದ್ದರು.

ಸೋಮವಾರ ಪ್ರಾತಃಕಾಲ ಶ್ರೀ ಜ. ರೇಣುಕಾಚಾರ್ಯರ ಮೂರ್ತಿಗೆ ರುದ್ರಾಭಿಷೇಕ ನಂತರ ಪಂಚಾಚಾರ್ಯರ ಧ್ವಜಾರೋಹಣ ಕಾರ್ಯಕ್ರಮ, ಶ್ರೀ ಇಟಗಿ ಬಸವೇಶ್ವರ ದೇವಸ್ಥಾನದಿಂದ ಸಕಲ ವಾದ್ಯವೈಭವಗಳೊಂದಿಗೆ ಶ್ರೀ ಜ.ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆಯು ನಗರದ ಪ್ರಮುಖ ಬೀದಿಗಳ ಮೂಲಕ ಶ್ರೀ ರಂಭಾಪುರಿ ಜ. ವೀರಗಂಗಾಧರ ಸಮುದಾಯ ಭವನದವರೆಗೆ ಅದ್ದೂರಿಯಾಗಿ ಜರುಗಿತು.

“ವೀರಶೈವ ಧರ್ಮ ಪುರಾತನವಾಗಿದ್ದು, ಸುಮಾರು 8ನೇ ಶತಮಾನಕ್ಕಿಂತಲೂ ಮೊದಲೇ ಈ ಧರ್ಮವಿದೆ. 12ನೇ ಶತಮಾನದಲ್ಲಿ ಬಂದ ಬಸವಣ್ಣನವರು ವೀರಶೈವ ಧರ್ಮಕ್ಕೆ ಮಾರುಹೋಗಿ ಗುರುಗಳಿಂದ ಮಂತ್ರದೀಕ್ಷೆ ಪಡೆದು ವೀರಶೈವ ಸಮಾಜ ಕಲ್ಯಾಣಕ್ಕೆ ಶ್ರಮಿಸಿದರು. ಜ.ರೇಣುಕಾಚಾರ್ಯರ ಜಯಂತಿ ಆಚರಣೆಗೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡಿ ಕಾರ್ಯಕ್ರಮ ಮಾಡಬೇಕು”

ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!