ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೂ ಮುಖ್ಯಮಂತ್ರಿ ಆಗುವೆ: ಶಾಸಕ ದೇಶಪಾಂಡೆ

0
Spread the love

ಮೈಸೂರು: ಹೈಕೋರ್ಟ್ ಅಂಗಳದಲ್ಲಿ ಮುಡಾ ಕಾನೂನು ಸಮರ ನಡೆಯುತ್ತಿದೆ. ಈವರೆಗೆ ಎರಡು ಬಾರಿ ಹೈಕೋರ್ಟ್ ನಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಸಂಬಂಧದ ವಿಚಾರಣೆ ಮುಂದೂಡಿಕೆ ಆಗಿದೆ. ನಾಳೆ ಹೈಕೋರ್ಟ್ ನಲ್ಲಿ ಪ್ರಾಸಿಕ್ಯೂಷನ್ ಕುರಿತ ಅರ್ಜಿ ವಿಚಾರಣೆ ನಡೆಯಲಿದೆ.

Advertisement

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗ್ತೀನಿ ಅಂತ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ. ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಈ ವೇಳೆ ಸಿಎಂ ಆಗುವ ಆಸೆ ಇದ್ಯಾ ಎಂಬ ಪತ್ರಕರ್ತರ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ. ನಿಮ್ಮಂಥ ಜನರಿಗೂ ಆಸೆ ಇರುತ್ತೆ. ಲೈಫ್‌ನಲ್ಲಿ ಗುರಿ ಮುಖ್ಯ. ನಾನು ಸಿದ್ದರಾಮಯ್ಯಗಿಂತ 2 ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರೂ ಸಿದ್ದರಾಮಯ್ಯ ಅನುಮತಿ ಕೊಡಬೇಕು.

ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ. 5 ವರ್ಷ ಸಿಎಂ ಆಗಿ ಅವರೇ ಇರ್ತಾರೆ. ಸದ್ಯಕ್ಕೆ ಬದಲಾವಣೆ ಚರ್ಚೆ ನಡೆದಿಲ್ಲ ಎಂದು ನುಡಿದಿದ್ದಾರೆ. ಸದ್ಯ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿಲ್ಲ. ನನಗೆ ಗೊತ್ತಿಲ್ಲದೆ ಯಾವ ಚರ್ಚೆಯೂ ನಡೆಯಲು ಸಾಧ್ಯವಿಲ್ಲ. ಪರಮೇಶ್ವರ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೇ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here