ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ಜಿಲ್ಲೆ-ಜಿಲ್ಲೆಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ.