ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ 3ನೇ ಹಂತದ ಶುದ್ಧೀಕರಣ ಮಾಡಿಸಲಿ ಎಂದು ಸಂಸದ ಡಾ.ಕೆ ಸುಧಾಕರ್ ಸವಾಲ್ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ಅವರೇ, 3ನೇ ಹಂತದ ಶುದ್ಧೀಕರಣ ಇಲ್ಲದೇ ಈ ನೀರನ್ನ ಕುಡಿಯಲು ಬಳಸಬಹುದು ಎಂದು ಹೇಳಿದ್ದಾರೆ.
Advertisement
ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ 3ನೇ ಹಂತದ ಶುದ್ಧೀಕರಣ ಮಾಡಿಸಲಿ. ಇಲ್ಲವಾದ್ರೆ 2028 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ 3ನೇ ಹಂತದ ಶುದ್ಧೀಕರಣ ಯೋಜನೆ ಜಾರಿ ಮಾಡಲಿದೆ ಎಂದು ಅವರು ಹೇಳಿದ್ದಾರೆ.
ಇನ್ನೂ ಕಾಂಗ್ರೆಸ್‌ನ ದಿವಾಳಿ ಸರ್ಕಾರದ ಪಾಪಕ್ಕೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜನತೆ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳಬೇಕಾ? ತಮ್ಮ ಪಾಪರ್ ಸರ್ಕಾರದ ಅಯೋಗ್ಯತೆಗೆ ಅಮಾಯಕ ಜನರು ಬಲಿಯಾಗಬೇಕಾ? ಎಂದು ಪ್ರಶ್ನಿಸಿದ್ದಾರೆ.