‘ಬಿಗ್ ಬಾಸ್ ಕನ್ನಡ ಸೀಸನ್ 12’ ಗ್ರ್ಯಾಂಡ್ ಫಿನಾಲೆ ಈಗಾಗಲೇ ಆರಂಭವಾಗಿದ್ದು.,ಇನ್ನೇನು ಕೆಲವೇ ಕ್ಷಣಗಳಲ್ಲಿ ವಿನ್ನರ್ ಘೋಷಣೆ ಆಗಲಿದೆ.
ಈ ನಡುವೆ ಗಿಲ್ಲಿ ಅವರೇ ಈ ಸೀಸನ್ ವಿನ್ನರ್ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ನಡುವೆ ಜೆಡಿಎಸ್ ಎಂಎಲ್ಸಿ ಟಿ.ಎ. ಶರವಣ ಮಹತ್ವದ ಘೋಷಣೆ ಮಾಡಿದ್ದಾರೆ. ಗಿಲ್ಲಿ ಬಿಗ್ ಬಾಸ್ ವಿನ್ನರ್ ಆದರೆ ತಮ್ಮ ಕಡೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಅವರು ಪ್ರಕಟಿಸಿದ್ದಾರೆ.
“ರೈತನ ಮಗ ಗಿಲ್ಲಿ ಈ ಬಾರಿ ಗೆಲ್ಲಲೇಬೇಕು. ಗಿಲ್ಲಿಯೇ ಈ ಸೀಸನ್ನ ವಿನ್ನರ್ ಆಗುತ್ತಾರೆ ಎಂಬ ವಿಶ್ವಾಸ ನನಗಿದೆ. ನಾನೂ ಪ್ರತಿದಿನ ಬಿಗ್ ಬಾಸ್ ನೋಡುತ್ತೇನೆ. ರನ್ನರ್ಅಪ್ ಸ್ಥಾನಕ್ಕೆ ರಕ್ಷಿತಾ ಅಥವಾ ಅಶ್ವಿನಿ ಬರಬಹುದು” ಎಂದು ಶರವಣ ಹೇಳಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಗಿಲ್ಲಿ ಹವಾ ಜೋರಾಗಿದ್ದು, ವಿನ್ನರ್ ಬಗ್ಗೆ ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ.



