ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್‌ನಲ್ಲೀಗ ಔತಣ ಕೂಟ ಆಯೋಜನೆಯ ಅಸಮಾಧಾನ ಒಂದೆಡೆಯಾದರೆ, ಅದನ್ನು ಮುಂದೂಡಿದ್ದಕ್ಕೆ ಅತೃಪ್ತಿಯೂ ಮತ್ತೊಂದೆಡೆ ಮನೆ ಮಾಡಿದೆ. ಅದಲ್ಲದೆ ಸಿಎಂ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ. ಈ ಭಿನ್ನರಾಗಗಳ ನಡುವೆ ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಚಿವ ಆರ್ ಬಿ ತಿಮ್ಮಾಪುರ ಹೇಳಿದ್ದಾರೆ.
Advertisement
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಲಿತರು ಯಾಕೆ ಸಿಎಂ ಆಗಬಾರದು? ನಾನು ಯಾಕೆ ಸಿಎಂ ಆಗಬಾರದು? ಮುಖ್ಯಮಂತ್ರಿ ಮಾಡಿದರೆ ಯಾರು ಬೇಡ ಅಂತಾರೆ. ನನಗೆ ಅಷ್ಟು ಶಕ್ತಿ ಇದೆಯೋ ಇಲ್ವೋ, ಸಿಎಲ್ಪಿಯಲ್ಲಿ ನನ್ನ ಒಪ್ಪುತ್ತಾರೋ ಇಲ್ವೋ? ಇವೆಲ್ಲವೂ ಪರಿಗಣನೆಗೆ ಬರುತ್ತದೆ. ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದರು.