ಚಿಕ್ಕೋಡಿ:– ಹೈಕಮಾಂಡ್ ಇಚ್ಚೆ ಇದ್ರೆ ಸಚಿವ ಸ್ಥಾನ ನನಗೆ ಸಿಕ್ಕೇ ಸಿಗುತ್ತದೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ ಎನ್ನುವ ಮೂಲಕ ಸಂಪುಟ ಪುನಾರಚನೆಯಲ್ಲಿ ಸಚಿವನಾಗುವ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ.
ಸಂಪುಟ ಪುನರ್ ರಚನೆ ಆಗುವುದು ಮೊದಲೇ ಗೊತ್ತಿತ್ತು.ಶನಿವಾರ ಬೆಳಗಾವಿಯಲ್ಲಿ ಸಿಎಂ ಸಹ ಹೇಳಿದ್ದಾರೆ. ನನಗೆ ಸಚಿವನಾಗುವ ಸಂದರ್ಭ ಬರಲಿ. ಆ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ನಾವು ಯಾವುದೇ ಅಧಿಕಾರವನ್ನ ಕೇಳಿ ಪಡೆದವನಲ್ಲ. ಭಗವಂತನ ಆಶೀರ್ವಾದ ಹಾಗೂ ಹೈಕಮಾಂಡ್ ಇಚ್ಛೆ ಇದ್ರೆ ಸಚಿವ ಸ್ಥಾನ ನನಗೆ ತಾನಾಗಿಯೇ ಬರುತ್ತದೆ. ಹೈಕಮಾಂಡ್ ಕೊಟ್ಟ ಜವಾಬ್ದಾರಿಯನ್ನ ನಾವು ನಿಭಾಯಿಸಲು ಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.


