ಒಡವೆ ಕದ್ದ ಕಳ್ಳ ಒಡವೆ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ? ಇಲ್ಲ‌ ಅಲ್ವಾ?: ಪ್ರತಾಪ್‌ ಸಿಂಹ ಪ್ರಶ್ನೆ

0
Spread the love

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು 14 ಸೈಟ್​ಗಳ ಕ್ರಯ ಪತ್ರ ಹಿಂದಿರುಗಿಸುವುದಾಗಿ ಮುಡಾಗೆ ಪತ್ರ ಬರೆದಿದ್ದಾರೆ. ಇನ್ನೂ ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,

Advertisement

ಅಧಿಕಾರದಲ್ಲಿ ಇದ್ದಾಗ ಕುಟುಂಬ ಹತ್ತಿರವಿಟ್ಟುಕೊಂಡರೆ, ಮಕ್ಕಳನ್ನು ಬೆಳೆಸಲು ಮುಂದಾದರೆ ಅವರು ನಿಮ್ಮ ಹೆಸರಿಗೆ ಕಳಂಕ ತರುತ್ತಾರೆ ಎಂಬುದಕ್ಕೆ ಇದು ಇನ್ನೊಂದು ಉದಾಹರಣೆ. ಒಡವೆ ಕದ್ದ ಕಳ್ಳ ಒಡವೆ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ? ಇಲ್ಲ‌ ಅಲ್ವಾ? ಎಂದು ಪ್ರಶ್ನಿಸಿದರು.

ಎರಡೂವರೆ ತಿಂಗಳ ಹಿಂದೆಯೇ ನಾನು ಸಿಎಂಗೆ ನಿಮಗೆ ಬಂದ ಅಕ್ರಮ ಸೈಟ್ ವಾಪಸ್‌ ಕೊಟ್ಟು ಬಿಡಿ ಎಂದು ಹೇಳಿದ್ದೆ. ಸಿಎಂ ಅವರ ಇಷ್ಟು ವರ್ಷದ ರಾಜಕೀಯ ಜೀವನವನ್ನು 14 ಸೈಟ್ ನುಂಗಬಾರದು ಎಂದು ಅಂದೇ ಹೇಳಿದ್ದೆ. ಎರಡೂವರೆ ತಿಂಗಳ ಹಿಂದೆ ವಾಪಸ್ ಕೊಟ್ಟಿದ್ದರೆ ಇವತ್ತು ಪ್ರಾಸಿಕ್ಯೂಷನ್, ಕೇಸ್ ಏನೂ ಆಗುತ್ತಿರಲಿಲ್ಲ. ಕುರ್ಚಿಯೂ ಅಲುಗಾಡುತ್ತಿರಲಿಲ್ಲ ಎಂದರು.


Spread the love

LEAVE A REPLY

Please enter your comment!
Please enter your name here