ದಿಸ್ಪುರ:- ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಸ್ಸಾಂನ ಗೋಲ್ಪಾರ ಜಿಲ್ಲೆಯ ದುಧ್ನೋಯ್ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುತ್ತೇವೆ. ಇದರಿಂದ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಬುಡಕಟ್ಟು ಅಭಿವೃದ್ಧಿಗಾಗಿ ಸಮಗ್ರ ಮಾರ್ಗಸೂಚಿಯನ್ನು ಸಿದ್ಧಪಡಿಸಿದ್ದಾರೆ. ಇದರ ಸಂಪೂರ್ಣ ಅನುಷ್ಠಾನವು ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದರ ಮೇಲೆ ಅವಲಂಬಿತವಾಗಿದೆ ಎಂದಿದ್ದಾರೆ.
ಪ್ರಧಾನಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಬುಡಕಟ್ಟು ಜನಾಂಗದವರ ಅಭಿವೃದ್ಧಿಗಾಗಿ ಒಂದು ಮಾರ್ಗಸೂಚಿಯನ್ನು ಸಿದ್ಧಪಡಿಸಿದ್ದಾರೆ. ಅದನ್ನು ಮುಂದಕ್ಕೆ ತೆಗೆದುಕೊಂಡು ಹೋಗಿ ಜಾರಿಗೆ ತರಲು ಬಿಜೆಪಿಗೆ ಮತ ಹಾಕಿ ಎಂದು ಜನತೆಗೆ ಮನವಿ ಮಾಡಿದ್ದಾರೆ.



