ನಟಿ ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಪಾತ್ರವಿದ್ದರೆ ಅವರ ಹೆಸರು ಹೇಳಲಿ: ಸಚಿವ ಚಲುವರಾಯಸ್ವಾಮಿ

0
Spread the love

ಬೆಂಗಳೂರು: ನಟಿ ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಪಾತ್ರವಿದ್ದರೆ ಅವರ ಹೆಸರು ಹೇಳಲಿ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿ ರನ್ಯಾ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು,

Advertisement

ಪ್ರಕರಣದಲ್ಲಿ ಸಚಿವರ ಪಾತ್ರವಿದ್ದರೆ ಅವರ ಹೆಸರು ಹೇಳಲಿ, ಈಗಾಗಲೇ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದಾರೆ. ತನಿಖೆ ಆಗಲಿ, ಎಲ್ಲವೂ ಹೊರಗೆ ಬರಲಿ. ಬಿಜೆಪಿ, ಜೆಡಿಎಸ್ನವರು ಟೀಕೆ ಮಾಡುತ್ತಿದ್ದಾರೆ. ಆದರೆ ಅವರು ಹೇಳಿದ್ರಲ್ಲಿ ಯಾವುದೂ ಸತ್ಯವಿಲ್ಲ ಎಂದರು.

ಇನ್ನೂ ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಕರ್ನಾಟಕ ವಿಧಾನಸಭೆಯಲ್ಲಿ ಭಾರಿ ಸದ್ದು ಮಾಡಿದೆ. ಬಿಜೆಪಿ ಶಾಸಕರು ಪ್ರಭಾವಿ ಸಚಿವರ ಹೆಸರು ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ. ಗೃಹ ಸಚಿವರು ಈ ಬಗ್ಗೆ ಮಾಹಿತಿ ಇಲ್ಲ ಎಂದಿದ್ದು, ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ಸದನದಲ್ಲಿ ಕಲಾಪದ ವೇಳೆ ತುಸು ಹೊತ್ತು ಕೋಲಾಹಲವೇ ನಡೆದಿತ್ತು.


Spread the love

LEAVE A REPLY

Please enter your comment!
Please enter your name here