ಬೆಳಗಾವಿ: ದುಡ್ಡಿದ್ದರೆ ಎಲ್ಲಾ ಸೌಲಭ್ಯ ಸಿಗುತ್ತದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಜೋಶಿ ಯಾರ ಪರವಾಗಿದ್ದಾರೆ? ಬಡವರಿಗೆ ಜೋಶಿಯವರ ಕೊಡುಗೆ ಏನು? ನಾವು ಐದು ಗ್ಯಾರಂಟಿ ಕೊಟ್ಟಿದ್ದು ಯಾರ ಪರ? ಟೀಕೆ ಮಾಡಬೇಕು ಅಂತ ಮಾಡ್ತಿದ್ದಾರೆ. ಅವರಿಗೆ ಏನೂ ನೈತಿಕತೆ ಇದೆ ಎಂದು ಇದೇ ವೇಳೆ ಕಿಡಿಕಾರಿದರು.
ಈಗಾಗಲೇ ಪ್ರಕರಣ ಸಂಬಂಧ ಏಳು ಜನ ಜೈಲು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಶರವಣ, ಶರಣಬಸವ, ಪ್ರಭು.ಎಸ್, ಎಲ್.ಎಸ್.ತಿಪ್ಪೇಸ್ವಾಮಿ, ಶ್ರೀಕಾಂತ್ ತಳವಾರ್, ಹೆಡ್ ವಾರ್ಡರ್ನ್ ವೆಂಕಪ್ಪ, ಸಂತೋಷ್ ಕುಮಾರ್, ನರಸಪ್ಪ ಎಂಬವರನ್ನು ಅಮಾನತು ಮಾಡಿದ್ದೇವೆ. ಘಟನೆ ಬಗ್ಗೆ ವರದಿ ಕೇಳಿರುವುದಾಗಿ ಗೃಹ ಸಚಿವ ಪರಮೇಶ್ವರ್ ಕೂಡ ತಿಳಿಸಿದ್ದಾರೆ.
ಡಿಜಿ ಅವರು ಪರಪ್ಪನ ಅಗ್ರಹಾರಕ್ಕೆ ಭೇಟಿ ಕೊಟ್ಟಿದ್ದಾರೆ. ಇಂತಹ ಘಟನೆ ನಡೆಯಬಾರದು. ಯಾರು ಅವಕಾಶ ಕೊಟ್ಟಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಹಿರಿಯ ಅಧಿಕಾರಿಗಳನ್ನು ಅಲ್ಲಿಂದ ಶಿಫ್ಟ್ ಮಾಡ್ತೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.