ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ ಕದ್ದೊಯ್ದ ಖದೀಮ!

0
Spread the love

ಬೆಂಗಳೂರು’:– ನಗರದ ಜ್ಞಾನಭಾರತಿಯ ಮಲ್ಲತ್ತಹಳ್ಳಿಯಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು 1 ಕೆಜಿ ಚಿನ್ನ, 4 ಲಕ್ಷ ರೂ. ನಗದು ಕಳ್ಳತನ ಮಾಡಿರುವ ಘಟನೆ ಜರುಗಿದೆ.

Advertisement

ಕಳೆದ ಶುಕ್ರವಾರ ನಟೇಶ್ ಅವರು ಮೈಸೂರಿಗೆ ತೆರಳಿದ್ದರು. ಬಳಿಕ ಶನಿವಾರ ವಾಪಸ್ ಬಂದು ನೋಡಿದಾಗ ಮನೆಯಲ್ಲಿದ್ದ 1 ಕೆ.ಜಿ ಚಿನ್ನ ಹಾಗೂ 4 ಲಕ್ಷ ರೂ. ನಗದು ಸೇರಿ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದು ಕಂಡುಬಂದಿದೆ. ಟೆಕ್ಕಿ ನಟೇಶ್ ಅವರ ಮನೆಯಲ್ಲಿ ಕಳ್ಳತನವಾಗಿದೆ.

ಸದ್ಯ ಈ ಸಂಬಂಧ ನಟೇಶ್ ಅವರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯ ಅಕ್ಕಪಕ್ಕದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here