ಬೆಳಗಾವಿ: ನಮ್ಮ ಹೋರಾಟ ಹತ್ತಿಕ್ಕಲು ಪ್ರಯತ್ನಿಸಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಪಂಚಮಸಾಲಿ 2A ಮೀಸಲಾತಿಗಾಗಿ ಆಗ್ರಹಿಸಿ ನಾಳೆಯಿಂದ ಬೃಹತ್ ಹೋರಾಟ ನಡೆಸಲು ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶ್ರೀಗಳು, ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರತಿಭಟನೆ ನಡೆಸುವಾಗ ಇಂತಹ ನಿರ್ಬಂಧಗಳನ್ನು ವಿಧಿಸಬಾರದು.
ನಮ್ಮ ಹೋರಾಟ ಹತ್ತಿಕ್ಕಲು ಪ್ರಯತ್ನಿಸಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ನಾವು ಹಿಂಸಾತ್ಮಕ ಹೋರಾಟಕ್ಕೆ ಎಂದೂ ಪ್ರಚೋದನೆ ನೀಡಿಲ್ಲ. ಹೋರಾಟ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡಬಾರದು ಎಂದು ಸಿಎಂ ಅವರಿಗೆ ಮನವಿ ಮಾಡುತ್ತೇನೆ ಎಂದರು.
ಇನ್ನೂ ಪಂಚಮಸಾಲಿ ಸಮುದಾಯವು ಪ್ರಸ್ತುತ 3B ವರ್ಗದ ಅಡಿಯಲ್ಲಿದೆ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗಗಳಲ್ಲಿ ಶೇಕಡಾ ಐದು ಮೀಸಲಾತಿಯನ್ನು ಪಡೆಯುತ್ತದೆ. ಆದರೆ ಅದನ್ನು 2ಎ ಸೇರಿಸಬೇಕು ಎಂದು ಶ್ರೀಗಳು ಹೇಳಿದ್ದಾರೆ.