ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಗೆಲ್ಲಬೇಕು ಅಂದರೆ ಸಿದ್ದರಾಮಯ್ಯನವರು ಇರಬೇಕು ಎಂದು ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ನಲ್ಲಿ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಪೈಪೋಟಿ ದಿನಕ್ಕೊಂದು ಸ್ವರೂಪ, ತಂತ್ರಗಾರಿಕೆ, ಕ್ಷಣಕ್ಕೊಂದು ತಿರುವು ಪಡೆಯುತ್ತಲೇ ಇದೆ. ಇದೀಗ ಈ ಬಗ್ಗೆ ನಗರದಲ್ಲಿ ಮಾತನಾಡಿದ ಸತೀಶ್ ಜಾರಕಿಹೋಳಿ ಅವರು,
Advertisement
ಸಿದ್ದರಾಮಯ್ಯನವ್ರು ಇರಬೇಕು ಅಂತಾ ನಮ್ಮ ಆಶಯ ಕೂಡ ಇದೆ. ಚುನಾವಣೆ ರಾಜಕೀಯದಿಂದ ನಿವೃತ್ತಿ ಆದ್ರೂ ಸಕ್ರಿಯ ರಾಜಕೀಯದಲ್ಲಿ ಇರಬೇಕು. ಮುಂದಿನ ಚುನಾವಣೆಯಲ್ಲಿ ಗೆಲ್ಲಬೇಕು ಅಂದರೆ ಸಿದ್ದರಾಮಯ್ಯನವರು ಇರಬೇಕು. ಆಗಲೇ ಚುನಾವಣೆ ಗೆಲ್ಲಲು ಸಾಧ್ಯವಾಗುತ್ತೆ. ಇನ್ನೊಂದು ಅವಧಿಯವರೆಗೂ ಅವರು ರಾಜಕೀಯದಲ್ಲಿರಬೇಕು ಎಂದು ಹೇಳಿದ್ದಾರೆ.