ಮಹಿಳೆಯರು ಬಿಜೆಪಿ ಶಾಲು ಹಾಕಿಕೊಂಡು ಬಂದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ ಡಾ. ಜಿ ಪರಮೇಶ್ವರ್

0
Spread the love

ಬೆಂಗಳೂರು: ಮಹಿಳೆಯರು ಬಿಜೆಪಿ ಶಾಲು ಹಾಕಿಕೊಂಡು ಬಂದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಮಹಿಳಾ ಮೋರ್ಚಾದ ಐದಾರು ಜನ ಕಾಂಗ್ರೆಸ್ ಶಾಲುಗಳನ್ನು ಹಾಕಿಕೊಂಡು ಕಾರ್ಯಕ್ರಮಕ್ಕೆ ಒಳಗೆ ಹೋಗಿದ್ದರು.

Advertisement

ನಂತರ ಅವರು ಎಲ್ಲರು ಮಾತಾಡುವಾಗ ಏನು ಮಾಡಿಲ್ಲ. ಮುಖ್ಯಮಂತ್ರಿಯವರು ಮಾತಾಡುವಾಗ ಕಪ್ಪು ಭಾವುಟ ಪ್ರದರ್ಶಿಸಿದ್ದಾರೆ. ಈ ವೇಳೆ ಲೋಪ ಇಲಾಖೆಯಿಂದ ಆಗಿದೆಯಾ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿಯವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಘಟನೆ ಭದ್ರತಾ ವೈಫಲ್ಯ ಎನ್ನುವುದಾದರೆ ಬಿಜೆಪಿಯವರು ಕಾಂಗ್ರೆಸ್ ಶಾಲು ಯಾಕೆ ಹಾಕಿಕೊಂಡು ಬಂದರು. ಬಿಜೆಪಿ ಶಾಲು ಹಾಕಿಕೊಂಡು ಬರಬಹುದಿತ್ತಲ್ಲವೇ? ಬಿಜೆಪಿ ಶಾಲು ಹಾಕಿಕೊಂಡು ಬಂದಿದ್ದರೆ ಭದ್ರತಾ ವೈಫಲ್ಯವೇ ಅಥವಾ ಏನು ಎಂಬುದು ಗೊತ್ತಾಗುತ್ತಿತ್ತು. ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಬರುವುದಕ್ಕೆ ಇವರಿಗೆ ಏನು ನೈತಿಕತೆ ಇತ್ತೋ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.

 


Spread the love

LEAVE A REPLY

Please enter your comment!
Please enter your name here