ನೀವೇನಾದರೂ ಹೀಗೆ ಮಾಡಿದ್ರೆ ನಾನೇ ಮದ್ದೂರಿಗೆ ಬರಬೇಕಾಗುತ್ತದೆ: ಮಂಡ್ಯ ಎಸ್ಪಿಗೆ ಹೆಚ್ ಡಿಕೆ ಖಡಕ್ ವಾರ್ನಿಂಗ್!

0
Spread the love

ಮಂಡ್ಯ:- ಯಾವುದೇ ಒತ್ತಡಕ್ಕೆ ಮಣಿದರೆ ಖುದ್ದಾಗಿ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಮಂಡ್ಯ ಎಸ್ಪಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡಕ್ಕೆ ಮಣಿದರೆ ಖುದ್ದಾಗಿ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಹೇಳಿರುವುದಾಗಿ ತಿಳಿದು ಬಂದಿದೆ. ಕಳೆದ ವರ್ಷವೂ ಕೂಡ ಇದೇ ರೀತಿ ಮಂಡ್ಯದ ನಾಗಮಂಗಲದಲ್ಲಿ ನಡೆದಿತ್ತು. ಅದೇ ರೀತಿ ಇದೀಗ ಪುನರಾವರ್ತನೆಯಾಗಿದೆ. ಈ ಪ್ರಕರಣವನ್ನು ದೊಡ್ಡ ಮಟ್ಟದಲ್ಲಿ ಹಿಂಸೆಗೆ ಒಳಗಾಗುವ ರೀತಿಗೆ ತೆಗೆದುಕೊಂಡು ಹೋಗಲು ಅವಕಾಶ ಕೊಡಬೇಡಿ ಎಂದು ನಾನು ಜಿಲ್ಲೆ ಹಾಗೂ ಮದ್ದೂರಿನ ಜನರಲ್ಲಿ ಕೇಳಿಕೊಳ್ಳುತ್ತೇನೆ.

ನಾವು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆಯುತ್ತೇವೆ. ಈ ರೀತಿ ಮಂಡ್ಯದಲ್ಲಿ ಯಾವತ್ತೂ ನಡೆದಿರಲಿಲ್ಲ. ಆದರೆ ರಾಜ್ಯದಲ್ಲಿ ಈ ರೀತಿ ಘಟನೆಯಾಗಲು ಕಾಂಗ್ರೆಸ್ ಆಡಳಿತವೇ ಕಾರಣ. ಜೊತೆಗೆ ಹಿಂದೂ ಸಮಾಜವನ್ನು ಅಸಮಾಧಾನಕ್ಕೆ ಒಳಗಾಗುವ ವಾತಾವರಣವನ್ನು ಕಾಂಗ್ರೆಸ್ ಸರ್ಕಾರ ನಿರ್ಮಾಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here