ಬೆಂಗಳೂರು: ಗ್ಯಾರಂಟಿ ಯೋಜನೆ ಬೇಡವಾದ್ರೆ ಅದನ್ನು ಬೇಡ ಎಂದು ವಾಪಸ್ ಕೊಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಫಲಾನುಭವಿಸಿ ಅದನ್ನೇ ಟೀಕೆ ಮಾಡಿದರೆ ಹೇಗೆ? ಹೀಗಾಗಿ ಗ್ಯಾರಂಟಿ ಟೀಕಿಸುವ ವಿರೋಧ ಪಕ್ಷದವರಿಗೆ ನಾನು ಸವಾಲು ಹಾಕಿದ್ದೇನೆ. ಗ್ಯಾರಂಟಿ ಯೋಜನೆ ಬೇಡವಾದರೆ ಅದನ್ನು ಬೇಡ ಎಂದು ವಾಪಸ್ ಕೊಡಿ ಎಂದು ಹೇಳಿದರು.
Advertisement
ನನಗೆ ಯುವಕರು ಹಾಗೂ ಮಹಿಳೆಯರ ಮೇಲೆ ಹೆಚ್ಚು ನಂಬಿಕೆ. ಹೀಗಾಗಿ, ನಮ್ಮ ಗ್ಯಾರಂಟಿ ಯೋಜನೆಗಳು ಈ ವರ್ಗದವರ ಮೇಲೆ ಹೆಚ್ಚು ಕೇಂದ್ರೀಕೃತವಾಗಿದೆ. ಗ್ಯಾರಂಟಿ ಸಮಿತಿಯಲ್ಲಿ ಮಹಿಳೆಯರಿಗೆ ಜವಾಬ್ದಾರಿ ನೀಡಲಾಗಿದೆ. ನಮ್ಮ ಸರ್ಕಾರದ ಕೆಲಸಗಳನ್ನು ವಿರೋಧ ಪಕ್ಷಗಳು ಟೀಕೆ ಮಾಡುತ್ತಾರೆ. ಅವರು ಏನು ಬೇಕಾದರೂ ಟೀಕೆ ಮಾಡಲಿ. ಅವರ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ ಎಂದರು.