ಮೈಸೂರು: ಚಾಮುಂಡಿ ಬೆಟ್ಟದ ಬಗ್ಗೆ ಪದೇ ಪದೇ ಮಾತನಾಡಿದ್ರೆ ಚಾಮುಂಡೇಶ್ವರಿ ಚಲೋ ಮಾಡ್ತೀವಿ ಎಂದು ವಿಷಕ್ಷನಾಯಕ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆ ಮುಸಲ್ಮಾನರ ಮೂಗಿಗೆ ತುಪ್ಪ ಸುರಿಯಿರಿ.
Advertisement
ಆದರೆ ಈಗ ಯಾಕೆ ವೋಟಿನ ಓಲೈಕೆ ರಾಜಕಾರಣ? ಚಾಮುಂಡಿ ಬೆಟ್ಟದ ಬಗ್ಗೆ ಪದೇ ಪದೇ ಮಾತನಾಡಿದ್ರೆ ಚಾಮುಂಡೇಶ್ವರಿ ಚಲೋ ಕೂಡ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದ್ದಾರೆ. ಬಾನು ಮುಷ್ತಾಕ್ ಕನ್ನಡ ಧ್ವಜಕ್ಕೆ ಅವಮಾನ ಮಾಡಿದ್ದಾರೆ.
ಹೀಗಾಗಿ ಕನ್ನಡಿಗರ ಕ್ಷಮೆ ಕೇಳ್ಬೇಕು. ಆನಂತರ ದಸರಾ ಉದ್ಘಾಟನೆ ಬಗ್ಗೆ ನೋಡುವ. 6 ಕೋಟಿ ಹಿಂದೂಗಳಲ್ಲಿ ಒಬ್ಬ ಸಾಧಕ ಸಿಗೋದಿಲ್ವಾ? ಕನ್ನಡದ ಬಗ್ಗೆ ಅಗೌರವ ತೋರಿದವರನ್ನೇ ಕರೆಯಬೇಕಿತ್ತಾ? ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ರು.


