ಬೆಂಗಳೂರು: ಇನ್ಮುಂದೆ ಯಡಿಯೂರಪ್ಪ ಬಗ್ಗೆ ಅನಾವಶ್ಯಕ ಮಾತಾಡಿದರೆ ತಕ್ಕ ಪಾಠ ಕಲಿಸ್ತೇವೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇನ್ಮುಂದೆ ಯಡಿಯೂರಪ್ಪ ಬಗ್ಗೆ ಅನಾವಶ್ಯಕ ಮಾತಾಡಿದರೆ ತಕ್ಕ ಪಾಠ ಕಲಿಸ್ತೇವೆ.
Advertisement
ರಮೇಶ್ ಜಾರಕಿಹೊಳಿ ಅವರೇ ಎರಡು ಪಕ್ಷ ಸುತ್ತಿ ಬಿಜೆಪಿಗೆ ಬಂದಿದ್ದೀರ. ಯಡಿಯೂರಪ್ಪ ಬಗ್ಗೆ ಹಗುರವಾಗಿ ಮಾತಾಡಿರೋದು ನಮಗೆ, ಕಾರ್ಯಕರ್ತರಿಗೆ ನೋವು ತಂದಿದೆ ಎಂದರು.
ಇನ್ನೂ ನಿಮ್ಮ ಹೋರಾಟ ಕಾಂಗ್ರೆಸ್ ವಿರುದ್ಧ ಇರಬೇಕು. ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಅಲ್ಲ. ಹೈಕಮಾಂಡ್‌ಗೂ ಭೇಟಿ ಮಾಡಿ ತಿಳಿಸ್ತೇವೆ. ಮುಂದಿನ ವಾರ ಮತ್ತೊಂದು ಸಭೆ ನಡೆಸಿ ಒಂದು ತೀರ್ಮಾನ ಮಾಡ್ತೇವೆ ಎಂದು ಎಚ್ಚರಿಸಿದ್ದಾರೆ.