ಇಲಕಲ್ಲ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC)ಯ ಇಲಕಲ್ಲ ಡೀಪೋದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಲೆಕ್ಕಿಗ ಶ್ರೀ ಕುಮಾರಸ್ವಾಮಿ ವಿರಕ್ತಮಠ ಅವರು 2025–26ನೇ ಸಾಲಿನ ಸರ್ವೋತ್ತಮ ಪ್ರಶಂಸನಾ ಗೌರವಕ್ಕೆ ಭಾಜನರಾಗಿದ್ದಾರೆ.2025ನೇ ಸಾಲಿನಲ್ಲಿ ಗರಿಷ್ಠ ಹಾಜರಾತಿ ಹಾಗೂ ಯಾವುದೇ ಅಪರಾಧ ದಾಖಲೆಗಳಿಲ್ಲದೇ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಿದ್ದ ಹಿನ್ನೆಲೆ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯ ಕಾರ್ಮಿಕ ಮತ್ತು ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ. ಈ ಕುರಿತು ಬಾಗಲಕೋಟೆ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ.
ಜನವರಿ 26ರಂದು ಹುಬ್ಬಳ್ಳಿಯ ಕೇಂದ್ರ ಕಚೇರಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದ ಐದು ಸಿಬ್ಬಂದಿಗಳ ಪೈಕಿ ಕುಮಾರಸ್ವಾಮಿ ವಿರಕ್ತಮಠ ಕೂಡ ಸೇರಿದ್ದಾರೆ.ಈ ಸಾಧನೆಗೆ ಇಲಕಲ್ಲ ಡೀಪೋದ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಸಂತಸ ವ್ಯಕ್ತಪಡಿಸಿದ್ದು, ಇದು ಡೀಪೋಗೆ ಸಂದ ಗೌರವ ಎಂದು ಶ್ಲಾಘಿಸಿದ್ದಾರೆ.
Trending Now



