ನವದೆಹಲಿ: ಆನ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಹಾಗೂ ನಟ ಸೋನು ಸೂದ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಹೌದು ಇದು 1xBet ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಈ ಹಿನ್ನೆಲೆ ಮೂವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಅದರಂತೆ ಸೆ.22ಕ್ಕೆ ರಾಬಿನ್ ಉತ್ತಪ್ಪ, ಸೆ.23ಕ್ಕೆ ಯುವರಾಜ್ ಸಿಂಗ್ ಹಾಗೂ ಸೆ.24ಕ್ಕೆ ನಟ ಸೋನು ಸೂದ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ವೇಳೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಮೂವರ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಇಡಿ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಸತತ 8 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು ಎಂದು ತಿಳಿದುಬಂದಿದೆ.
ಉತ್ತಪ್ಪ ಅಕ್ರಮ ಆನ್ ಲೈನ್ ಬೆಟ್ಟಿಂಗ್ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆ ಸಮನ್ಸ್ ಜಾರಿಯಾದ ಮೂರನೇ ಭಾರತೀಯ ಕ್ರಿಕೆಟಿಗರಾಗಿದ್ದಾರೆ. ಇದಕ್ಕೂ ಮೊದಲು ಇಡಿ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನ್ಆ ಹಾಗೂ ಶಿಖರ್ ಧವನ್ ಗೂ ಇಡಿ ಸಮನ್ಸ್ ನೀಡಿತ್ತು.